ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕಿ..!

ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಶಾಸಕಿ..!

ಬೆಳಗಾವಿ : ಬಿ.ಎಸ್ ಯಡಿಯೂರಪ್ಪ ಅವರು ಪಕ್ಷಾತೀತವಾಗಿ ಲೆಜೆಂಡ್ ನಾಯಕರು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶಂಸಿಸಿದರು.

ಸಿಎಂ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ಘೋಷಣೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‌ವೈ ಅವರಿಗೆ 50 ವರ್ಷ ರಾಜಕೀಯದಲ್ಲಿ ಅನುಭವ ಇದೆ. ಬಿಜೆಪಿ ಕಟ್ಟಿ ಬೆಳೆಸಿದ್ದ ಬಿಎಸ್‌ವೈ ಬಹಳಷ್ಟು ದುಃಖದಿಂದ ಭಾಷಣ ಮಾಡಿದರು. ಆ ಕ್ಷಣದಲ್ಲಿ ಯುಗಾಂತ್ಯ ಆಯಿತು ಅನಿಸಿತು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಯಡಿಯೂರಪ್ಪರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಹೋರಾಟ, ಧೈರ್ಯದ ಬಗ್ಗೆ ಅಭಿಮಾನ ಇದೆ. ಯಡಿಯೂರಪ್ಪ ಪಕ್ಷಾತೀತವಾಗಿ ಲೆಜೆಂಡ್ ನಾಯಕ. ದುಖಃದಿಂದ ರಾಜೀನಾಮೆ ನೀಡಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಎಂದರು.

ಇಂತಹ ಸಂದರ್ಭಗಳಲ್ಲಿ ಈ ಬೆಳವಣಿಗೆ ಅವಶ್ಯಕತೆ ಇತ್ತಾ? ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದರಿಂದ ಆಡಳಿತದ ಮೇಲೆ ಪರಿಣಾಮ ಬೀರಲಿದೆ. ಆಡಳತಕ್ಕಿಂತ ಬಿಜೆಪಿ ರಾಜಕೀಯ ಮುಖ್ಯ ಎಂದು ಅನಿಸುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Related