ತುಮಕೂರು: ತುಮಕೂರಿನಲ್ಲಿ ಹರಿಯುತ್ತಿರುವ ಹೇಮಾವತಿ ನದಿಯನ್ನು ರಾಮನಗರಕ್ಕೆ ಹರಿಸುವ ಕುರಿತಾಗಿ ಸರಕಾರ ಈಗಾಗಲೇ ಕಾಮಗಾರಿಯನ್ನು, ಈ ಕಾಮಗಾರಿಗೆ ವಿರೋಧವಾಗಿ ತುಮಕೂರು ನಗರದಾದ್ಯಂತ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಯಾವುದೇ ಕಾರಣಕ್ಕೂ ಹೇಮಾವತಿ ನದಿ ನೀರನ್ನು ರಾಮನಗರಕ್ಕೆ ಹರಿ ಬಿಡಲು ನಾವು ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇನ್ನು (ಭಾನುವಾರ ಜೂನ್ 01) ರಂದು ಹೇಮಾವತಿ ಎಕ್ಸ್ಪ್ರೆಸ್ ಲಿಂಕೆನಲ್ ಕುರಿತಾಗಿ ಮೂರು ಜನ ಶಾಸಕರು ಇಬ್ಬರು ಸ್ವಾಮೀಜಿ ಸೇರಿದಂತೆ ಪ್ರತಿಭಟನೆ ನಡೆಸಿದ 11 ಜನರ ಮೇಲೆ ಎಫ್ ಐ ಆರ್ ದಾಖಲಾಗಿದೆ.
ಇನ್ನು ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಿಚ್ಚು ರಾಜಕೀಯ ಜಟಾಪಟಿಗೆ ಕಾರಣವಾಗುತ್ತಿದ್ದಂತೆ ಇಂದು (ಸೋಮವಾರ ಜೂನ್ 02) ರಂದು ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರ ಸಮಿತಿಯು ಮಹತ್ವದ ಸಭೆ ಕರೆದಿದ್ದು, ಈ ಸಭೆಯಲ್ಲಿ ಸರ್ಕಾರಕ್ಕೆ ಯಾವ ರೀತಿ ಪಾಠ ಕಲಿಸಬೇಕು ಎಂಬುವ ಕುರಿತಾಗಿ ಮುಂದಿನ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಹಿಳೆಯರಿಗೆ ಸಹಿ ಸುದ್ದಿ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್!
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಿಚ್ಚು ಮತ್ತಷ್ಟು ಹೆಚ್ಚಾದೆ. ಇತ್ತ ಪೊಲೀಸರು ಎಫ್ಐಆರ್ ದಾಖಲಿಸಿರುವುದು ಹೋರಾಟಗಾರರನ್ನು ಮತ್ತಷ್ಟು ಕೇರಳಿಸಿದೆ. ಹೀಗಾಗಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿ, ಬಿಜೆಪಿ ಹಾಗೂ ವಿವಿಧ ರೈತ ಪರ ಸಂಘಟನೆಗಳ ಮುಖಂಡರಿಂದ ಸಭೆ ನಡೆಸಲು ಚಿಂತನೆ ನಡೆಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ತುಮಕೂರಿನ ಖಾಸಗಿ ಹೋಟೆಲ್ನಲ್ಲಿ ಹೇಮಾವತಿ ಲಿಂಕ್ ಕೆನಾಲ್ ಹೋರಾಟ ಸಮಿತಿ ಸಭೆ ನಡೆಯುತ್ತಿದ್ದು, ಶಾಸಕರಾದ ಜ್ಯೋತಿಗಣೇಶ್, ಬಿ.ಸುರೇಶ್ ಗೌಡ, ಎಂ.ಟಿ.ಕೃಷ್ಣಪ್ಪ, ರೈತ ಮುಖಂಡರು ಹಾಗೂ ಹೋರಾಟಗಾರರು ಸಭೆಯಲ್ಲಿ ಭಾಗಿಯಾಗಿದ್ದಾರೆ.
