ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ರಾಜ್ಯಧಾನಿ ಬೆಂಗಳೂರನ್ನು ಗ್ರೇಟರ್ ಬೆಂಗಳೂರು ಮಾಡುವ ಕನಸನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೊತ್ತಿದ್ದಾರೆ. ಈಗಾಗಲೇ ಗ್ರೇಟರ್ ಬೆಂಗಳೂರು ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಇಂದು (ಸೋಮವಾರ ಜುಲೈ 7) ರಂದು ಡಿಸಿಎಂ ಡಿಕೆ ಶಿವಕುಮಾರ್ ಅವರು, ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ಸಭೆ ನಡೆಸಿದರು. ಇದನ್ನೂ ಓದಿ: ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ
ಈ ಸಂದರ್ಭದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್, ಬ್ರಾಂಡ್ ಬೆಂಗಳೂರು ಸಮಿತಿ ಅಧ್ಯಕ್ಷ ಬಿ ಎಸ್ ಪಾಟೀಲ್, ಸದಸ್ಯ ರವಿಚಂದರ್, ಜಿಬಿಎ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಮುಖ್ಯ ಆಯುಕ್ತ ಮಹೇಶ್ವರ ರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಭಾಗವಹಿಸಿದ್ದರು.
