|ಪುರುಷರು ಪುರುಷರಾಗಿಯೇ ಇರುತ್ತಾರೆ,ನಾವು ಮಾತ್ರ ಬದಲಾಗಬೇಕು: ರಮ್ಯಾ

|ಪುರುಷರು ಪುರುಷರಾಗಿಯೇ ಇರುತ್ತಾರೆ,ನಾವು ಮಾತ್ರ ಬದಲಾಗಬೇಕು: ರಮ್ಯಾ

ಬೆಂಗಳೂರು: ಮೈಸೂರು ವಿದ್ಯಾರ್ಥಿ ಅತ್ಯಾಚಾರ ಪ್ರಕರಣದ ಕುರಿತು ನಡೆಯುತ್ತಿರುವ ಚರ್ಚೆಗೆ ಇದೀಗ ನಟಿ ರಮ್ಯಾ ಪ್ರವೇಶಿಸಿದ್ದು, ಪ್ರತಿ ಬಾರಿಯೂ ಪುರುಷರು ಮಾಡಿದ ತಪ್ಪಿಗೆ ಮಹಿಳೆಯರನ್ನೇ ಯಾಕೆ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತದೆ ಎಂದು ಗುರುವಾರ ತಮ್ಮ ಸೋಷಿಯಲ್ ಮೀಡಿಯಾದ ಅಕೌಂಟ್ ನಲ್ಲಿ ಪ್ರಶ್ನಿಸಿದ್ದಾರೆ.

ಮಹಿಳೆಯರ ಮೇಲೆ ಪುರುಷರಿಂದಾಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರವಾಗಲಿ ಅಥವಾ ದೈಹಿಕ, ಮಾನಸಿಕ ದೌರ್ಜನ್ಯವೇ ಆಗಲಿ.. ಮಹಿಳೆಯರಾದ ನಾವೇ ದೂಷಣೆಗೆ ಒಳಗಾಗುತ್ತೇವೆ. ಇದು ನಿನ್ನದೇ ತಪ್ಪು, ನೀನು ಹಾಗೆ ಹೇಳಬಾರದಿತ್ತು, ನೀನು ಹಾಗೆ ಮಾಡಬಾರದಿತ್ತು, ನಿನ್ನ ಉಡುಪು ತೀರಾ ಬಿಗಿಯಾಗಿದೆ, ತೀರಾ ಚಿಕ್ಕದಾಗಿದೆ, ತಡವಾಗಿ ಮನೆಯಿಂದ ಹೊರಗೆ ಹೋಗಬಾರದಿತ್ತು, ನೀನು ಮೇಕಪ್ ಧರಿಸಬಾರದಿತ್ತು, ಇದನ್ನೆಲ್ಲ ನಾವು ಆಗಾಗ ಕೇಳುತ್ತಲೇ ಇರುತ್ತೇವೆ! ಯಾಕೆ?” ಪುರುಷರು ಪುರುಷರಾಗಿಯೇ ಇರುತ್ತಾರೆ. ನಾವು ಮಾತ್ರ ಬದಲಾಗಬೇಕು. ನಾವು ಎಲ್ಲವನ್ನೂ ಸಹಿಸಿಕೊಳ್ಳಬೇಕು. ಇಲ್ಲ..! ಇನ್ನಾಗಲ್ಲ..! ಈ ನಾನ್ ಸೆನ್ಸ್ಗೆ ಈ ಕೂಡಲೆ ಪೂರ್ಣವಿರಾಮ ಇಡಿ! ನಿಜ ಹೇಳಬೇಕು ಅಂದ್ರೆ, ನಾನು ಇದನ್ನು ಮಾಡಿದ್ದೇನೆ. ನನ್ನ ಸ್ನೇಹಿತರೂ ಕೂಡ. ಆಪಾದನೆಯನ್ನು ಹೊತ್ತುಕೊಂಡಿದ್ದೇವೆ. ಆದರೆ ಏನ್ಗೊತ್ತಾ? ಇನ್ಮುಂದೆ ಇದನ್ನೆಲ್ಲಾ ಸಹಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಕುರುಡರಾಗಿರಬೇಡಿ.” ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಾರೆ ಸಾಕಷ್ಟು ಚರ್ಚೆಗಳು ನಡೆದವು. ಆ ವಿದ್ಯಾರ್ಥಿನಿ ರಾತ್ರಿ ಹೊತ್ತು ಅಲ್ಲೇಕೆ ಹೋಗಬೇಕಿತ್ತು ಎನ್ನುವ ಪ್ರಶ್ನೆಗಳು ಕೇಳಿ ಬಂದವು. ಇದಕ್ಕೆ ಉತ್ತರ ಎನ್ನುವಂತೆ ರಮ್ಯಾ ಧ್ವನಿಯೆತ್ತಿದಾರೆ.

Related