ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ: ಸಿಎಂ

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಒಂದಾದ ಮೇಲೆ ಒಂದರ ಬೆಲೆ ಹೆಚ್ಚಾಗುತ್ತಿದ್ದು ಆಗಸ್ಟ್ ಒಂದರಿಂದ ನಂದಿನಿ ಹಾಲಿನ ಬೆಲೆ ಪ್ರತಿ ಲೀಟರ್ಗೆ ರೂ.3 ಹೆಚ್ಚಾಗುತ್ತಿರುವುದರಿಂದ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದು ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಿದ್ದರಾಮಯ್ಯ ಅವರು, ಹಾಲಿನ ದರ ರೂ. 3 ಹೆಚ್ಚಿಸುವ ನಿರ್ಧಾರ ಕೆಎಂಎಫ್ ತೆಗೆದುಕೊಂಡಿದೆ, ತಮ್ಮನ್ನು ಸಭೆಗೆ ಆಹ್ವಾನಿಸಲಾಗಿತ್ತು, ಒಕ್ಕೂಟ ತೆಗೆದುಕೊಂಡಿರುವ ನಿರ್ಣಯವನ್ನು ಸಚಿವ ಸಂಪುಟದ ಗಮನಕ್ಕೆ ತರುವ ಕೆಲಸವನ್ನಷ್ಟೇ ತಾನು ಮಾಡಿದ್ದು ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ಈಗ ಹಾಲಿನ ದರ ರೂ. 39/ ಲೀಟರ್ ಇದೆ. ಹೆಚ್ಚಳದ ಬಳಿಕ ಅದು ರೂ. 42 ಆಗುತ್ತದೆ. ಅಷ್ಟಾಗಿಯೂ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ ಇದೆ. ಕೆಲ ರಾಜ್ಯಗಳಲ್ಲಿ ರೂ. 54-56/ ಲೀಟರ್ ಇದ್ದರೆ, ತಮಿಳುನಾಡಿನಲ್ಲಿ ರೂ. 44/ಲೀಟರ್ ಇದೆ ಅಂತ ಸಿದ್ದರಾಮಯ್ಯ ಹೇಳಿದರು.

Related