ಬೆಂಜ್ ಕಾರಿನಲ್ಲಿ ಪತ್ತೆಯಾದ ಕೋಟಿ ಕೋಟಿ ಹಣ..!

ಬೆಂಜ್ ಕಾರಿನಲ್ಲಿ ಪತ್ತೆಯಾದ ಕೋಟಿ ಕೋಟಿ ಹಣ..!

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಚುನಾವಣಾ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ಹದಿನಂತೆ ಕಣ್ಣಿಟ್ಟಿದ್ದಾರೆ.

ಇನ್ನು ಬೆಂಗಳೂರು ನಗರದಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಚುನಾವಣಾ ಅಧಿಕಾರಿಗಳು ಕಾರಿನಲ್ಲಿದ್ದ ಹಣ ನೋಡಿ ಕಂಗಾಲಾಗಿದ್ದಾರೆ.

ಹೌದು, ಜಯನಗರದಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗುತ್ತಿದ್ದ ಸುಮಾರು 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆಯಿಲ್ಲದೆ ಸಾಗುಸುತ್ತಿದ್ದ ಸುಮಾರು 1.40 ಕೋಟಿ ಹಣದ ಬಗ್ಗೆ ನಿಖರ ಮಾಹಿತಿಯ ಮೇರೆಗೆ ಚುನಾವಣಾ ಅಧಿಕಾರಿಗಳು ಭರ್ಜರಿ ಭೇಟಿ ಮಾಡಿದ್ದಾರೆ.

ಇನ್ನು ಚುನಾವಣೆ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಮಾಡುತ್ತಿರುವ ಸಂದರ್ಭದಲ್ಲಿ ಹಣ ಸಾಗಿಸುತ್ತಿದ್ದ ಆರೋಪಿಗಳು ಗೋಣಿ ಚೀಲದಲ್ಲಿ ಹಣವನ್ನು ಅಡಗಿಸಿಟ್ಟಿದ್ದರು.. ಇನ್ನು ಚುನಾವಣಾ ಅಧಿಕಾರಿಗಳು ಗೋಣಿಚೀಲದಲ್ಲಿ ಏನಿದೆ ಎಂದು ಕೇಳಿದರೆ, ಗೋಣಿಚೀಲದಲ್ಲಿ ಮಾವಿನ ಹಣ್ಣಿದೆ ಎಂದು ಹೇಳಿದ್ದರು. ಆದರೆ ಚುನಾವಣಾ ಅಧಿಕಾರಿಗಳಿಗೆ ಅನುಮಾನ ಬಂದ ಕಾರಣ ಕಾರಿನ ಗಾಜು ಒಡೆದು ತಪಾಸನೆ ಮಾಡಿದರೆ ಅಲ್ಲಿ ಸಿಕ್ಕಿದ್ದೇ 1.40 ಕೋಟಿ ರೂಪಾಯಿ.

ಹೌದು, ಜಯನಗರದಲ್ಲಿ ಬೆಂಜ್‌ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್‌ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು ಕೂಡಲೇ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಯಾರಿಗೂ ಅನುಮಾನ ಬಾರದಿರಲಿ ಎಂದು ಕಿಡಿಗೇಡಿಗಳು ಸುಮಾರು 1.40 ಕೋಟಿ ರೂ. ಹಣವನ್ನು ಗೋಣಿಚೀಲದಲ್ಲಿ ತುಂಬಿದ್ದರು. ಅಧಿಕಾರಿಗಳು ತಪಾಸಣೆಗೆ ಮುಂದಾದ ಮಾವಿನ ಹಣ್ಣಿನ ಬ್ಯಾಗ್‌ ಎಂದು ಸಬುಬೂ ಹೇಳಿ ಕಾರನ್ನು ಲಾಕ್‌ ಮಾಡಿದ್ದಾರೆ. ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್‌ ಒಡೆದು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Related