ನನ್ನದು ಮತ್ತು ಬಿಜೆಪಿಯ ಸಂಬಂಧ ಮುಗಿದ ಅಧ್ಯಾಯ: ಜನಾರ್ದನ ರೆಡ್ಡಿ

ನನ್ನದು ಮತ್ತು ಬಿಜೆಪಿಯ ಸಂಬಂಧ ಮುಗಿದ ಅಧ್ಯಾಯ: ಜನಾರ್ದನ ರೆಡ್ಡಿ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದು ಬಂದಿರುವ ಶಾಸಕ ಜನಾರ್ಧನ್ ರೆಡ್ಡಿ ಅವರು ಮತ್ತೆ ಬಿಜೆಪಿ ಸೇರುವ ಮಾತಿಲ್ಲ ಎಂದು ಸ್ಪಷ್ಟ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ನನ್ನದು ಮತ್ತು ಬಿಜೆಪಿಯ ಸಂಬಂಧ ಮುಗಿದ ಅಧ್ಯಾಯ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಮರಳಿ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ. ಬಿಜೆಪಿಯೊಂದಿಗೆ ನಮ್ಮ ಪಕ್ಷವನ್ನು ವಿಲೀನ ಮಾಡುವುದಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿಯೇ ಸ್ಪರ್ಧೆ ಮಾಡ್ತೇವೆ.

ಪಕ್ಷ ಸಂಘಟನೆಯ ಬಳಿಕ ಎಷ್ಟು ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂಬುದನ್ನು ಫೆಬ್ರವರಿಯಲ್ಲಿ ಹೇಳುತ್ತೇವೆ ಎಂದರು. ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಯಾರೂ ಸಂಪರ್ಕ ಮಾಡಿಲ್ಲ. ಶಾಸಕ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಅವರಿಗೆ ಶುಭಾಶಯಗಳನ್ನು ಮಾತ್ರ ಹೇಳಿದ್ದೇನೆ. ಯಾವುದೇ ಹಂತದಲ್ಲೂ ರಾಜಕೀಯ ಚರ್ಚೆ ಮಾಡಿಲ್ಲ ಎಂದು ಹೇಳಿದರು.

 

Related