ಸಚಿವ ಬಿ. ನಾಗೇಂದ್ರಗೆ ಸಿಬಿಐ ನೋಟಿಸ್ ನೀಡುವ ಸಾಧ್ಯತೆ..!

ಸಚಿವ ಬಿ. ನಾಗೇಂದ್ರಗೆ ಸಿಬಿಐ ನೋಟಿಸ್ ನೀಡುವ ಸಾಧ್ಯತೆ..!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಇದರಲ್ಲಿ ಘಟಾನುಘಟಿಗಳ ಕೈವಾಡವಿದೆ ಎಂದು ಈಗಾಗಲೇ ವಿಪಕ್ಷ ನಾಯಕರುಗಳು ಆರೋಪ ಮಾಡುತ್ತಿದ್ದಾರೆ.

ಇನ್ನು ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ ನಾಗೇಂದ್ರ ಅವರಿಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಸಿಬಿಐ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರದ ಮೇಲೆ ಕೇಸು ದಾಖಲಿಸಿಕೊಂಡಿದೆ. ಇದನ್ನೂ ಓದಿ: ಇವರೇ ನೋಡಿ ಕೇಂದ್ರದಲ್ಲಿ ಸರ್ಕಾರ ರಚನೆ ಕಿಂಗ್ ಮೇಕರ್ಸ್…!

ಇನ್ನು ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಸಹಕಾರ ಬ್ಯಾಂಕ್ ಅಧ್ಯಕ್ಷರಾದ ಸಿಐಡಿ ಎಸ್ಐಟಿ ಅಧಿಕಾರಿಗಳು ಇತ್ತೀಚಿಗಷ್ಟೇ ಬಂಧಿಸಿತ್ತು. ಇದಾದ ಬಳಿಕ ಇದೀಗ ಸಚಿವ ಬಿ ನಾಗೇಂದ್ರ ಅವರು ಕೂಡ ಸಿಬಿಐ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಇದೆ.

ಹೌದು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಸಹಕಾರ ಬ್ಯಾಂಕ್‌ ಅಧ್ಯಕ್ಷರನ್ನು ಸಿಐಡಿ ಎಸ್‌ಐಟಿ (SIT) ಇತ್ತೀಚೆಗೆ ಬಂಧಿಸಿತ್ತು. ಮತ್ತೊಂದೆಡೆ ಈ ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಸಿಬಿಐ (CBI) ಎಫ್​ಐಆರ್ ದಾಖಲಿಸಿಕೊಂಡಿದೆ. ಬ್ಯಾಂಕ್​ನ ಮೂವರು ಅಧಿಕಾರಿಗಳು ಸೇರಿ ಐವರ ವಿರುದ್ಧ ದೂರು ದಾಖಲಾಗಿದೆ. ಸಚಿವ ನಾಗೇಂದ್ರಗೆ ನೋಟಿಸ್ ನೀಡುವ ಸಾಧ್ಯತೆ ಇದೆ.

ವಾಲ್ಮೀಕಿ ನಿಗಮದ 94.73 ಕೋಟಿ ರೂ. ಹಣವನ್ನು ದೋಚುವಲ್ಲಿ ಸತ್ಯನಾರಾಯಣ ಪ್ರಮುಖ ಆರೋಪಿ. ಯೂನಿಯನ್‌ ಬ್ಯಾಂಕ್‌ನಲ್ಲಿರುವ ನಿಗಮದ ಖಾತೆಯಿಂದ 18 ನಕಲಿ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾವಣೆ ಆಗಿತ್ತು. ಈ ವಂಚನೆಯ ಜಾಡು ಬೆನ್ನತ್ತಿದಾಗ ಫೈನಾನ್ಸ್‌ ಕಂಪನಿ ಸತ್ಯನಾರಾಯಣ ಅವರೇ 18 ನಕಲಿ ಖಾತೆಗಳನ್ನು ಸೃಷ್ಟಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಈ ಬೆನ್ನಲ್ಲೇ ತನಿಖಾ ತಂಡ ಹೈದರಾಬಾದ್‌ಗೆ ತೆರಳಿ ಸತ್ಯನಾರಾಯಣ ಅವರನ್ನು ಸಿಐಡಿ ಕಚೇರಿಗೆ ಕರೆತಂದಿತ್ತು. ಬಳಿಕ ಬಂಧನ ಪ್ರಕ್ರಿಯೆ ಪೂರ್ಣಗೊಳಿಸಿ ವಿಚಾರಣಾ ನ್ಯಾಯಾಲಯದಿಂದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆ ಸಲುವಾಗಿ ಜೂನ್ 12ರವರೆಗೆ ಕಸ್ಟಡಿಗೆ ಪಡೆಯಲಾಗಿದೆ ಎಂದು ಎಸ್‌ಐಟಿ ಮೂಲಗಳು ಖಚಿತಪಡಿಸಿವೆ. ಇದೀಗ ಡಿಜಿಎಂ ಜೆ. ಮಹೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಐವರ ವಿರುದ್ಧ ಸಿಬಿಐ ಎಫ್​ಐಆರ್ ದಾಖಲಿಸಿಕೊಂಡಿದೆ.

 

Related