ನೆರೆ ಪೀಡಿತ ಪ್ರದೇಶಕ್ಕೆ ಶಾಸಕ ಭೇಟಿ

ನೆರೆ ಪೀಡಿತ ಪ್ರದೇಶಕ್ಕೆ ಶಾಸಕ ಭೇಟಿ

ಯಾದಗಿರಿ : ತಾಲ್ಲೂಕಿನ ಗೂಡೂರ, ಆನೂರ ಕೆ ಗ್ರಾಮಗಳ ಬ್ರಿಜ್ ಕಂ ಬ್ಯಾರೇಜ್ ಸ್ಥಳಕ್ಕೆ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

ಬೆಳೆ ಹಾನಿಯ ಬಗ್ಗೆ ಸರ್ಕಾರಕ್ಕೆ ವರದಿ ನೀಡಬೇಕು. ಸೂಕ್ತ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನದಿ ಪಾತ್ರದಲ್ಲಿ ಎನ್ಡಿಆರ್ ಎಫ್ ತಂಡವನ್ನು ನಿಯೋಜಿಸುವಂತೆ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರಿಗೆ ಸೂಚನೆ ನೀಡಿದರು. ಬೆಳೆ ಹಾಳಾದ ಬಗ್ಗೆ ಸೂಕ್ತ ಪರಿಹಾರ ಒದಗಿಸಿ ಎಂದು ಶಾಸಕ ನಾಗನಗೌಡ ಕಂದಕೂರ ಅವರಿಗೆ ನದಿ ಪಾತ್ರದ ಜನತೆ ಮನವಿ ಮಾಡಿದರು.

Related