ಮೋದಿಯವರು ಕೊಟ್ಟ ಮಾತಲ್ಲಿ ಒಂದನ್ನೂ ಈಡೇರಿಸಲಿಲ್ಲ: ಸಿಎಂ

ಮೋದಿಯವರು ಕೊಟ್ಟ ಮಾತಲ್ಲಿ ಒಂದನ್ನೂ ಈಡೇರಿಸಲಿಲ್ಲ: ಸಿಎಂ

ದೊಡ್ಡಬಳ್ಳಾಪುರ: ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ ಹೆಚ್ಚಳ, ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ. ಈ ಚಂದಕ್ಕೆ ಇವರು ಪ್ರಧಾನಿ ಆಗ್ಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ದೊಡ್ಡಬಳ್ಳಾಪುರದಲ್ಲಿ ರೋಡ್ ಶೋ ನಡೆಸಿ ಮಾತನಾಡಿದ ಅವರು, ಹತ್ತತ್ತು ವರ್ಷ ಪ್ರಧಾನಿ ಆಗಿ ರೈತರಿಗೆ, ಕಾರ್ಮಿಕರಿಗೆ, ಯುವ ಸಮೂಹಕ್ಕೆ, ಮಹಿಳೆಯರಿಗೆ, ದುಡಿಯುವ ವರ್ಗಗಳಿಗೆ, ಕೃಷಿ ಕಾರ್ಮಿಕರಿಗೆ, ಮಧ್ಯಮ ವರ್ಗದವರಿಗೆ, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗೆ ಒಂದೇ ಒಂದು ಕಾರ್ಯಕ್ರಮವನ್ನೂ ಕೊಡಲಾಗಲಿಲ್ಲವಲ್ಲ ಏಕೆ ಎಂದು ಪ್ರಶ್ನಿಸಿದರು.

ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿದ್ರಿ ತರಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಿ, ಹೊಸ ಉದ್ಯೋಗ ಸೃಷ್ಟಿಯಾಗುವುದಿರಲಿ ಇರುವ ಉದ್ಯೋಗಗಳೇ ನಷ್ಟ ಆದವು. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದಿರಿ, ಆದರೆ ರೈತರ ಖರ್ಚು ಮೂರು ಪಟ್ಟು ಆಗಿದೆ, ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚುವುದಾಗಿ ಹೇಳಿದ್ರಿ, ಆದರೆ ರೂಪಾಯಿ ಮೌಲ್ಯ ಹೆಚ್ಚಾಗಲೇ ಇಲ್ಲ ಎಂದು ಮೋದಿ ವೈಫಲ್ಯಗಳ ಸುದೀರ್ಘ ಪಟ್ಟಿಯನ್ನೇ ಪ್ರಸ್ತಾಪಿಸಿದರು.

ಬಿಜೆಪಿಯಾಗಲೀ, ಮೋದಿಯವರಾಗಲೀ ಕೊಟ್ಟ ಮಾತಲ್ಲಿ ಒಂದನ್ನೂ ಈಡೇರಿಸಲಿಲ್ಲ. ಬದಲಿಗೆ ಹೇಳಿದ್ದಕ್ಕೆ ಉಲ್ಟಾ ಅನಾಹುತಗಳನ್ನೇ ಮಾಡಿದ್ದಾರೆ ಎಂದರು.

 

Related