ಅಹ್ಮದಾಬಾದ್: ಗುಜರಾತಿನ ಅಹ್ಮದಾಬಾದ್ ನಲ್ಲಿ ನಡೆದ ಭೀಕರ ವಿಮಾನ ದುರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು (ಶುಕ್ರವಾರ ಜೂನ್ 13) ರಂದು ಬೆಳಿಗ್ಗೆ 8.30 ಕ್ಕೆ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುರಂತಕ್ಕೆ ಪ್ರಮುಖ ಕಾರಣವೇನೆಂದು ಪತ್ತೆಹಚ್ಚಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ವಿಮಾನ ದುರ್ಘಟನೆಗೊಂಡ ಸ್ಥಳಕ್ಕೆ ಭೇಟಿ ನೀಡಿದ ನಂತರ ಈ ದುರ್ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿ ಬಂದು ಚಿಕಿತ್ಸೆ ಪಡೆಯುತ್ತಿರುವವರಿಗೆ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಆಸ್ಪತ್ರೆಗೆ ನರೇಂದ್ರ ಮೋದಿ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದಾರೆ. ಇದನ್ನೂ ಓದಿ: ವಿಮಾನ ಪತನಕ್ಕೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಅಹ್ಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ದುರಂತದಲ್ಲಿ ಪ್ರಯಾಣಿಕರು, ಸಿಬ್ಬಂದಿ, ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಒಟ್ಟು 265 ಜನರು ಜೀವ ಕಳೆದುಕೊಂಡಿದ್ದಾರೆ. ಆದರೆ ವಿಮಾನದಲ್ಲಿದ್ದ ಓರ್ವ ವ್ಯಕ್ತಿ, ಹಾಸ್ಟೆಲ್ನಲ್ಲಿದ್ದ ಉಳಿದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವ್ರಿಗೆಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
