ನವದೆಹಲಿ: ಬಾಹ್ಯಾಕಾಶದಲ್ಲಿ ಸುಮಾರು 9 ತಿಂಗಳ ಕಾಲ ಶೋಧನೆ ನಡೆಸಿ 9 ತಿಂಗಳ ನಂತರ ಇದೀಗ ಭೂಮಿಗೆ ಮರಳಿರುವ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಗತ ಕೋರಿದ್ದಾರೆ.
ಹೌದು, ಸುನೀತಾ ವಿಲಿಯಮ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಗಗನಯಾನಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬ್ಯಾರಿ ‘ಬುಚ್’ ವಿಲ್ಮೋರ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ದಿಂದ ಭೂಮಿಗೆ ಬಂದಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಸ್ವಾಗತ, ಕೋರಿದ್ದಾರೆ. ಭೂಮಿ ನಿಮ್ಮನ್ನು ಮಿಸ್ ಮಾಡಿಕೊಂಡಿತ್ತು. ಸುನೀತಾ ವಿಲಿಯಮ್ಸ್ ಮತ್ತು ಗಗನಯಾತ್ರಿಗಳು ಮತ್ತೊಮ್ಮೆ ಪರಿಶ್ರಮ ಎಂದರೆ ಏನು ಎಂದು ನಮಗೆ ತೋರಿಸಿದ್ದಾರೆ. ಅಗಾಧವಾದ ಅಪರಿಚಿತತೆಯ ಮುಂದೆ ಅವರ ಅಚಲ ದೃಢಸಂಕಲ್ಪವು ಲಕ್ಷಾಂತರ ಜನರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ” ಎಂದು ಮೋದಿ ಹೇಳಿದ್ದಾರೆ. ಇದನ್ನೂ ಓದಿ: 9 ತಿಂಗಳ ನಂತರ ಭೂಮಿಗೆ ಮರಳಿದ ವಿಜ್ಞಾನಿಗಳು
ಮಾರ್ಗದರ್ಶಕ ಮತ್ತು ಐಕಾನ್ ಆಗಿರುವ ಸುನೀತಾ ವಿಲಿಯಮ್ಸ್ ತಮ್ಮ ವೃತ್ತಿಜೀವನದುದ್ದಕ್ಕೂ ಈ ಮನೋಭಾವವನ್ನು ಪ್ರದರ್ಶಿಸಿದ್ದಾರೆ. ಅವರ ಸುರಕ್ಷಿತ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ದಣಿವರಿಯಿಲ್ಲದೆ ಕೆಲಸ ಮಾಡಿದ ಎಲ್ಲರ ಬಗ್ಗೆ ನಮಗೆ ಬಹಳ ಹೆಮ್ಮೆಯಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
