ನಾಳೆ ಮೋದಿ ನಾಮಪತ್ರ ಸಲ್ಲಿಕೆ

ನಾಳೆ ಮೋದಿ ನಾಮಪತ್ರ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿ ತಮ್ಮ ಅಧಿಕಾರದ ಗದ್ದುಗೆಯನ್ನು ಏರಲು ಎಲ್ಲ ರೀತಿ ತಯಾರಿಯನ್ನು ಮಾಡಿಕೊಂಡಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಮೇ 14ರಂದು  ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಇನ್ನು ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡಲಿದ್ದಾರೆ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಹೌದು, ಮೂರನೇ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಕಾಶಿಗೆ ಆಗಮಿಸುತ್ತಿದ್ದುಇಂದು ಸಂಜೆ ರೋಡ್​ ಶೋ ನಡೆಸಲಿದ್ದಾರೆ.  ಮೇ 14 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅದಕ್ಕೂ ಮುನ್ನ ಮೋದಿ ರೋಡ್​ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ. ಮೋದಿಯವರನ್ನು ಬರಮಾಡಿಕೊಳ್ಳಲು ವಾರಾಣಸಿ ಸಜ್ಜಾಗಿದೆ.

ಇನ್ನು ಮೇ14ರಂದು ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸೇರಿದಂತೆ 12 ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿರಲಿದ್ದಾರೆ. ಇದಲ್ಲದೆ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್​ನಾಥ್​ ಸಿಂಗ್ ಸೇರಿದಂತೆ ಅನೇಕ ಕೇಂದ್ರ ಸಚಿವರೂ ಇರಲಿದ್ದಾರೆ.

 

Related