ಸುಳ್ಳು ಹೇಳುವುದೇ ಮೋದಿಯವರ ಧೇಯ : ಮಲ್ಲಿಕಾರ್ಜುನ ಖರ್ಗೆ

ಸುಳ್ಳು ಹೇಳುವುದೇ ಮೋದಿಯವರ ಧೇಯ : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಪರವಾಗಿ ಅಬ್ಬರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ 5 ಗ್ಯಾರಂಟಿ ನೀಡಿರುವ ಕಾಂಗ್ರೆಸ್ ಸರ್ಕಾರ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.

ನಗರದಲ್ಲಿ ಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದ ಐದು ಭರವಸೆಗಳು ಮತ್ತು ಅಖಿಲ ಭಾರತ ಮಟ್ಟದಲ್ಲಿ ಕಾಂಗ್ರೆಸ್ ನೀಡಿದ ಐದು ನ್ಯಾಯ ಹಾಗೂ 25 ಭರವಸೆಗಳು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ‘ಬ್ರಹ್ಮಾಸ್ತ್ರ’ ಆಗಲಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಮ್ಮ ಜನಪರ ಪ್ರಣಾಳಿಕೆ ನೋಡಿ ಪ್ರಧಾನಿ ಮೋದಿಯವರು ನಿರಾಶರಾಗಿದ್ದಾರೆ. ಹೀಗಾಗಿ ಪದೇ ಪದೇ ಕಾಂಗ್ರೆಸ್ ಪಕ್ಷವನ್ನು ಹೀಯಾಳಿಸಲು ಪ್ರಾರಂಭಿಸಿದ್ದಾರೆ. ಆ ಭಗವಂತನನ್ನು ದಿನಕ್ಕೆ ಎಷ್ಟು ಬಾರಿ ಅವರು ನೆನಸುತ್ತಾರೆ ಗೊತ್ತಿಲ್ಲಾ, ಆದರೆ ಅದಕ್ಕಿಂತ ಹೆಚ್ಚು ಬಾರಿ ಅವರು ಕಾಂಗ್ರೆಸ್ ಪಕ್ಷವನ್ನ ಹೀಯಾಳಿಸೋದು ಸತ್ಯ, ಪ್ರತಿ ದಿನ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ನನ್ನನ್ನ ದೂಷಿಸುತ್ತಾರೆ. ಈ ಮೂಲಕ ಜನರಲ್ಲಿ ನಮ್ಮ ವಿರುದ್ದ ದ್ವೇಷ ಹುಟ್ಟಿಸುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕನಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ..!

ಇಡೀ ದೇಶದ ಜನತೆಗೆ ಸುಳ್ಳು ಹೇಳುವುದೇ ನರೇಂದ್ರ ಮೋದಿಯವರ ಧ್ಯೇಯವಾಗಿದೆ. 2014 ಮತ್ತು 2019ರಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದಾರೆ. ಆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಠೇವಣಿ ಇಟ್ಟಿರುವ ಕಪ್ಪುಹಣದಿಂದ ಪ್ರತಿಯೊಬ್ಬ ನಾಗರಿಕರಿಗೆ 15 ಲಕ್ಷ ರೂ ಹಣವನ್ನು ಖಾತೆಗೆ ಹಾಕುವುದಾಗಿ ಹೇಳಿದ್ದರು, ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹಾಗೂ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆ ನೀಡಿದ್ದರು. ಆದರೆ ‘ಮೋದಿ ಸುಳ್ಳಿನ ಸರದಾರ’ ಎಂಬುದನ್ನು ಮೋದಿ ಸಾಬೀತು ಮಾಡಿದ್ದಾರೆ ಎಂದು ಖರ್ಗೆ ಆರೋಪಿಸಿದರು.

 

Related