ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಮಂಗನ ಕಾಯಿಲೆ!

  • In State
  • January 31, 2024
  • 101 Views
ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಮಂಗನ ಕಾಯಿಲೆ!

ಉತ್ತರ ಕನ್ನ: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮಂಗನ ಕಾಯಿಲೆಯಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಲ್ಲೂ ಕೂಡ ಈ ಮಂಗನ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದು, ಇದರಿಂದ ಸುಧಾರಿಸಿಕೊಳ್ಳಲು ಪರದಾಡುವಂತಹ ಪರಿಸ್ಥಿತಿ ಬಂದಿದೆ.

ಅದರಲ್ಲೂ ರಾಜ್ಯದಲ್ಲಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹೆಚ್ಚಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದರಿಂದ ನಗರದಲ್ಲಿರುವ ಜನರಿಗೆ ಇದರ ಆತಂಕ ಹೆಚ್ಚಾಗಿದೆ.

ಉತ್ತರ ಕನ್ನ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ ಸುಮಾರು 8 ಜನರಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಸಿದ್ದಾಪುರದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ 7 ಪ್ರಕರಣಗಳು ಬೆಳಕಿಗೆ ಬಂದಿದೆ. ಈ ಮೂಲಕ 10 ದಿನದಲ್ಲಿ ಇದರ ಸಂಖ್ಯೆ 16 ಕ್ಕೇರಿದೆ. ಇನ್ನು 10 ವರ್ಷದ ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

 

Related