ರಾಜ್ಯದಲ್ಲಿ ನಮ್ಮನ್ನು ಆಯ್ಕೆ ಮಾಡಿದ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ: ಪರಂ

ರಾಜ್ಯದಲ್ಲಿ ನಮ್ಮನ್ನು ಆಯ್ಕೆ ಮಾಡಿದ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ: ಪರಂ

ಬೆಂಗಳೂರು: ರಾಜ್ಯದಲ್ಲಿ ಜಾತಿಯ ವಿಚಾರ ಮಾತನಾಡುವುದು ಬೇಡ. ಎಲ್ಲರೂ ಒಗ್ಗಟ್ಟಾಗಿ ಬದುಕಿದರೆ ಚಂದ. ಜಾತಿ ಆಧಾರದ ಮೇಲೆ ಯಾರು ಬದುಕಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಬೆಂಗಳೂರಿನಲ್ಲಿ ತಿರುಗೇಟು ನೀಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳ ನಮಗೆ ಮತನೀಡಿದ್ದಾರೆ. ಹಾಗಂತ ಹೇಳಿ ನಾವು ಹಿಂದು-ಮುಸ್ಲಿಂ ಬೇರೆ ಬೇರೆ ಎಂದು ಯಾವತ್ತೂ ರಾಜಕೀಯ ಮಾಡುತ್ತಿಲ್ಲ. ನಾವೆಲ್ಲರೂ ಒಂದೇ ತಾಯಿ ಮಕ್ಕಳು. ಒಂದೇ ಮಣ್ಣಿನ ಅನ್ನ ತಿನ್ನುವವರು ಹಾಗಾಗಿ ನಾವು ಜಾತಿಯ ರಾಜಕೀಯ ಮಾಡೋದು ಬೇಡವೆಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ನಮ್ಮನ್ನ ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ ಎಂದು ಪ್ರಶ್ನಿಸಿದರು.

ಯಾವುದೇ ಒಂದು ಆರೋಪ ಮಾಡಬೇಕಾದರೆ ಅದಕ್ಕೆ ಒಂದು ಇತಿಮಿತಿ ಇರುತ್ತದೆ. ಹಾಗಂತ ಹೇಳಿ ಮಿತಿಮೀರಿ ಆರೋಪ ಮಾಡಿದರೆ ಕಾನೂನು ಬಾಹಿರವಾಗುತ್ತದೆ. ಹೇಳುವುದಕ್ಕೂ ಒಂದು ಮಿತಿ ಇರಬೇಕು. ಇಂತಹ ವಿಷಯಗಳಲ್ಲಿ ನಾವು ನ್ಯಾಯವಾಗಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

 

Related