ರಾಜ್ಯ ಗ್ರಾ.ಪಂ ಚುನಾವಣೆಗೆ ಮುಹೂರ್ತ ಫಿಕ್ಸ್

ರಾಜ್ಯ ಗ್ರಾ.ಪಂ ಚುನಾವಣೆಗೆ ಮುಹೂರ್ತ ಫಿಕ್ಸ್

ಬೆಂಗಳೂರು : ತೀವ್ರ ಕೂತುಹಲ ಕೆರಳಿಸಿದ್ದ ರಾಜ್ಯದ ಗ್ರಾ.ಪಂ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಡಿ. 22 ಮತ್ತು 27 ರಂದು ಗ್ರಾ.ಪಂ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಘೋಷಣೆ ಮಾಡಿದೆ.

ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ರಾಜ್ಯದಲ್ಲಿ 2 ಹಂತಗಳಲ್ಲಿ ಒಟ್ಟು 5,762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿದೆ. ರಾಜ್ಯದ ಒಟ್ಟು 5,762 ಗ್ರಾಮ ಪಂಚಾಯಿತಿಗಳಿಗೆ ಡಿ. 22 ಮತ್ತು 27 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಘೋಷಣೆ ಮಾಡಿದೆ.

Related