ಎಚ್ಚೆತ್ತುಕೊಂಡ್ರ ಮುಜರಾಯಿ ಇಲಾಖೆ ಸಚಿವರು?

ಎಚ್ಚೆತ್ತುಕೊಂಡ್ರ ಮುಜರಾಯಿ ಇಲಾಖೆ ಸಚಿವರು?

ಬೆಂಗಳೂರು: ಬಿಜೆಪಿ ನಾಯಕರು ಮತ್ತು ಹಿಂದೂ ಸಂಘಟನೆಗಳು ಸರ್ಕಾರದ ವಿರುದ್ಧ ಪ್ರತಿಭಟನೆ ಕೈಗೊಳ್ಳುವ ಮೊದಲೇ ಮುಜರಾಯಿ ಇಲಾಖೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಅವರು ಎಚ್ಚೆತ್ತುಕೊಂಡಿದ್ದಾರೆ.

ಹೌದು, ರಾಜ್ಯದಲ್ಲಿನ ದೇವಸ್ಥಾನಗಳ ಜೀರ್ಣೋದ್ದಾರ ಅನುದಾನ ತಡೆ ಹಿಡಿದು ಆದೇಶ ಹೊರಡಿಸಿರುವುದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಎಚ್ಚೆತ್ತುಕೊಂಡಿದ್ದು, ಕೂಡಲೇ ಅನುದಾನಕ್ಕೆ ತಡೆ ನೀಡಿದ್ದ ಆದೇಶ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಇದನ್ನು ತೀವ್ರ ಸ್ವರೂಪಕ್ಕೆ ಕೊಂಡೊಯ್ಯುವ ಮೊದಲೇ ರಾಮಲಿಂಗರೆಡ್ಡಿ ಎಚ್ಚೆತ್ತುಕೊಂಡಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿ, ದೇಗುಲಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್ ಪಡೆಯುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ಮುಜರಾಯಿ ಇಲಾಖೆ ಆಯುಕ್ತರು ಕನ್​ಫ್ಯೂಸ್​ ಆಗಿದ್ದಾರೆ ಅಷ್ಟೇ. ಇಲಾಖೆಯಲ್ಲಿ ಅಕ್ರಮ ನಡೆದಿದೆ ಎಂಬ ಯಾವ ಅನುಮಾನವೂ ಇಲ್ಲ. ಯಾವ ದೇವಸ್ಥಾನದ ಕೆಲಸವನ್ನೂ ನಿಲ್ಲಿಸುವುದಕ್ಕೆ ಹೋಗುವುದಿಲ್ಲ ಎಂದು ಹೇಳಿದರು.

Related