ಆರ್ ಆರ್ ನಗರದಲ್ಲಿ ಮುನಿರತ್ನ ಭರ್ಜರಿ ಗೆಲುವು

ಆರ್ ಆರ್ ನಗರದಲ್ಲಿ ಮುನಿರತ್ನ ಭರ್ಜರಿ ಗೆಲುವು

ಬೆಂಗಳೂರು : ನವೆಂಬರ್ 3ರಂದು ನಡೆದಂತ ಶಿರಾ ಹಾಗೂ ಆರ್ ಆರ್ ನಗರ ಕ್ಷೇತ್ರಗಳ ಉಪಚುನಾವಣೆಯ ಮತಏಣಿಕ ಕಾರ್ಯ ಇಂದು ನಡೆಯುತ್ತಿದೆ. ಇದೀಗ ಸಿಕ್ಕಿರುವ ಮಾಹಿತಿಯಂತೆ ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ 44.548 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಬೇಕಿದೆ.

ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ. ಮುನಿರತ್ನ 1.03.291 ಮತಗಳನ್ನು ಗಳಿಸಿದ್ದರೇ, ಕಾಂಗ್ರೆಸ್ ನ ಹೆಚ್ ಕುಸುಮಾ 58,743 ಮತಗಳನ್ನು ಪಡೆದಿದ್ದಾರೆ.

ಜೆಡಿಎಸ್‌ನ ಕೃಷ್ಣ ಮೂರ್ತಿ 6.381 ಗಳಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ಮುನಿರತ್ನ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 44,548 ಮತಗಳ ಅಂತರದಿAದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

Related