ಬೈಕ್ ಸವಾರನನ್ನು ಕಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

  • In Crime
  • May 10, 2022
  • 216 Views

ತುಮಕೂರು: ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದವನನ್ನು ಅಡ್ಡಗಟ್ಟಿ ಕೊಲೆ ಮಾಡಿರುವ ಘಟನೆ ಗುಬ್ಬಿ ತಾಲೂಕಿನ ಕಸಬಾ ಹೋಬಳಿಯ ಕರಿಶೆಟ್ಟಿಹಳ್ಳಿ ಬಳಿ ನಡೆದಿದೆ.


ಚೌಕೇನಹಳ್ಳಿ ಗ್ರಾಮದ ನಿವಾಸಿ ಮೂಡ್ಲಯ್ಯ (40) ಕೊಲೆಯಾದ ವ್ಯಕ್ತಿ. ಮೂಡ್ಲಯ್ಯ ತಡರಾತ್ರಿ ದ್ವಿಚಕ್ರ ವಾಹನದಲ್ಲಿ ತೋಟದಿಂದ ಮನೆಗೆ ತೆರಳುತ್ತಿದ್ದರು. ಈ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊಲೆ ಕಾರಣ ತಿಳಿದುಬಂದಿಲ್ಲ.

Related