ರೈತರಿಗೆ ಪರಿಹಾರದ ಮೊತ್ತ ಹೆಚ್ಚಳಕ್ಕೆ ಮುರುಗೇಶ್ ನಿರಾಣಿ ಮನವಿ

ರೈತರಿಗೆ ಪರಿಹಾರದ ಮೊತ್ತ ಹೆಚ್ಚಳಕ್ಕೆ ಮುರುಗೇಶ್ ನಿರಾಣಿ ಮನವಿ

ನವದೆಹಲಿ– ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನಲ್ಲಿ ಕೃಷ್ಣ ನದಿಯ ಪ್ರವಾಹದಿಂದಾಗಿ ಕೃಷಿ ಭೂಮಿಯು ಫಲವತ್ತತೆಯನ್ನು ಕಳೆದುಕೊಂಡಿದ್ದು ರೈತರಿಗೆ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಸಚಿವ ಮುರುಗೇಶ್ ಆರ್ ನಿರಾಣಿ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
ಗುರುವಾರ ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶೋಭಾ ಕರದ್ಲಾಂಜೆ ಅವರನ್ನು ಭೇಟಿಯಾದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ನಿರಾಣಿ ಅವರು ತಕ್ಷಣವೇ ಪರಿಹಾರದ ಮೊತ್ತವನ್ನು ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು. ಕೃಷ್ಣ ನದಿಯಿಂದ  ಪ್ರವಾಹ ಉಂಟಾಗುವ ಕಾರಣ, ರೈತರ ಜಮೀನಿನ ಫಲವತ್ತಾದ ಮಣ್ಣು ಕೊಚ್ಚಿ ಹೋಗುತ್ತದೆ. ಪ್ರವಾಹದಿಂದ ಬೆಳೆಗಳನ್ನು ನಾಶವಾದರೆ ಮತ್ತೊಂದು ಕಡೆ ಕೃಷಿ ಜಮೀನು ಫಲವತ್ತತೆಯನ್ನು ಕಳೆದುಕೊಂಡಿದೆ. ಸಣ್ಣ, ಅತಿ ಸಣ್ಣ ಮತ್ತು ಕಡಿಮೆ ಆದಾಯ ಹೊಂದಿರುವ ರೈತರಿದ್ದು, ಕೃಷಿಯೇ ಜೀವನದ ಆಧಾರವಾಗಿದೆ. ಸರಕಾರ ನೀಡುತ್ತಿರುವ ಪರಿಹಾರದ ಮೊತ್ತ ಜೀವನ ನಿರ್ವಾಹಣೆಗೆ ಸಾಕಾಗದ ಕಾರಣ, ಪರಿಹಾರದ ಮೊತ್ತ ಹೆಚ್ಚಳವಾಗಬೇಕಾದ ಅಗತ್ಯವಿದೆ ಎಂದು ಮನವಿಮಾಡಿಕೊಂಡರು.
ಸಚಿವ ನಿರಾಣಿ ಅವರ ಮನವಿಗೆ ಸೂಕ್ತವಾಗಿ ಸ್ಪಂಧಿಸಿದ ಶೋಭಾ ಕರದ್ಲಾಂಜೆ ಅವರು, ರೈತರ ಹಿತಕಾಪಾಡಲು ಕೇಂದ್ರ ಸರ್ಕಾರ ಬದ್ದವಾಗಿದೆ ಎಂಬ ಭರವಸೆಯನ್ನು ನೀಡಿದ್ದಾರೆ.

Related