Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನನ್ನ ಸೆಲ್ಯೂಟ್: ಸಿಎಂ
  • Bangalore
  • Front news
  • Politics
  • State

ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನನ್ನ ಸೆಲ್ಯೂಟ್: ಸಿಎಂ

admin May 7, 2025
Spread the love

ಬೆಂಗಳೂರು: ಪಾಕಿಸ್ತಾನದ ಉಗ್ರರ ಹುಟ್ಟಡಗಿಸಲು ಭಾರತವು ಎಲ್ಲಾ ರೀತಿ ತಯಾರಿ ಮಾಡಿಕೊಂಡು ಪಾಕಿಸ್ತಾನ ಉಗ್ರರನ್ನು ಕೇವಲ 23 ನಿಮಿಷದಲ್ಲಿ 80 ಉಗ್ರರನ್ನು ಹೊಡೆದುರುಳಿಸಿದ್ದಾರೆ. ಭಾರತವು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿರುವುದನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಇದರ ಜೊತೆಗೆ ದೇಶದ ಸೈನಿಕರು ಹಾಗೂ ವಾಯುಪಡೆಗಳನ್ನು ಕೊಂಡಾಡಿದ್ದಾರೆ.

ಉಗ್ರರ ಅಡಗುತಾಣಗಳ ಮೇಲೆ ಭಾರತ ದಾಳಿ ಮಾಡಿರುವುದರ ಕುರಿತಾಗಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ, “ಆಪರೇಷನ್ ಸಿಂಧೂರ್ ಹಿಂದಿನ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನಾನು ಸೆಲ್ಯೂಟ್​ ಮಾಡುತ್ತೇನೆ. ಅವರ ವೀರೋಚಿತ ಕಾರ್ಯಾಚರಣೆ ಭಾರತ ಯಾವುದೇ ರೀತಿಯ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂದು ಪುನರುಚ್ಚರಿಸುತ್ತದೆ” ಎಂದಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ದಾಳಿ ಕೇವಲ ಮುಗ್ಧ ಜೀವಗಳ ಮೇಲೆ ನಡೆದದ್ದಲ್ಲ, ಅದು ಭಾರತದ ಕನಸುಗಳು ಮತ್ತು ಚೈತನ್ಯದ ಮೇಲಿನ ದಾಳಿಯಾಗಿದೆ. ನಮ್ಮ ಧೈರ್ಯಶಾಲಿ ಸೈನಿಕರ ಪ್ರತಿಯೊಂದು ಪ್ರಯತ್ನವೂ ದಾಳಿಯ ಸಂತ್ರಸ್ತರಿಗೆ, ಅವರ ಕುಟುಂಬಗಳಿಗೆ ಮತ್ತು ಶಾಂತಿ ಮತ್ತು ಮಾನವೀಯತೆಯಲ್ಲಿ ನಂಬಿಕೆ ಹೊಂದಿರುವ ಪ್ರತಿಯೊಬ್ಬ ಭಾರತೀಯರಿಗೆ ನ್ಯಾಯ ಒದಗಿಸುವ ಪ್ರತಿಜ್ಞೆಯಾಗಿದೆ” ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ: ಸುದೀಪ್

“ನಮ್ಮ ಪಡೆಗಳೊಂದಿಗೆ ಅಚಲವಾದ ಒಗ್ಗಟ್ಟನ್ನು ಪ್ರದರ್ಶಿಸಲು ಕರ್ನಾಟಕ ದೇಶದ ಜೊತೆ ನಿಲುತ್ತದೆ. ನಿಮ್ಮ ಶೌರ್ಯ, ತ್ಯಾಗ ಮತ್ತು ನಮ್ಮ ಸಾರ್ವಭೌಮತ್ವವನ್ನು ರಕ್ಷಿಸಲು ನಿಮ್ಮ ಅಚಲ ಬದ್ಧತೆಯ ಬಗ್ಗೆ ನಮಗೆ ಹೆಮ್ಮೆ ಇದೆ. ನಮ್ಮ ನೆಲದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ. ಭಾರತವು ಶಕ್ತಿ ಮತ್ತು ಏಕತೆಯಿಂದ ಪ್ರತಿಕ್ರಿಯಿಸುತ್ತದೆ” ಎಂದು ತಿಳಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಭಾರತದ ಸಿಂಧೂರ ಮತ್ತೆ ನಮಗೆ ಸಿಕ್ಕಿದೆ: ಸುದೀಪ್
Next: ಜಿ.ಎಸ್.ಸಿದ್ದಲಿಂಗಯ್ಯ ನಿಧನ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.