ಮೈಸೂರು: ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ದಾಳಿ

  • In State
  • December 5, 2023
  • 95 Views
ಮೈಸೂರು: ಸರ್ಕಾರಿ ಕಾಲೇಜು ಉಪನ್ಯಾಸಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ರಾಜ್ಯದಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ.

ಇನ್ನು ಮೈಸೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ, ನಂಜನಗೂಡಿನ ಸರ್ಕಾರಿ ಕಾಲೇಜಿನ ಉಪನ್ಯಾಸಕರಾದ ಮಹಾದೇವಪ್ಪ ಸ್ವಾಮಿ ಅವರ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಕೈಗೊಂಡಿದ್ದಾರೆ. ಇದರೊಂದಿಗೆ ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ದಾಳಿ ನಡೆದಿದೆ.

ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ವಿರುದ್ಧ ಕುಟುಂಬದ ಹೆಸರಿನಲ್ಲಿ MS Group ಕಂಪನಿ ನಡೆಸುತ್ತಿದ್ದು, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದು, ಆಸ್ತಿ ಪರಿಶೀಲನೆ ನಡೆಸಲಾಗುತ್ತಿದೆ.

ಲೋಕಾಯುಕ್ತ ADGP ಪ್ರಶಾಂತ್ ಕುಮಾರ್ ಹಾಗೂ IGP ಸುಬ್ರಮಣ್ಣೀಶ್ವರ ರಾವ್, ಎಸ್ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, ಡಿಎಸ್‌ಪಿ ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ದಾಳಿ ನಡೆದಿದೆ.

 

Related