ಸ್ವಚ್ಛ ಭಾರತದೆಡೆಗೆ ಮೈಸೂರು ಸಚಿವರ ನಡೆ

ಸ್ವಚ್ಛ ಭಾರತದೆಡೆಗೆ ಮೈಸೂರು ಸಚಿವರ ನಡೆ

ಮೈಸೂರು: ಮೈಸೂರು ನಗರದಲ್ಲಿ “Let’s do it Mysore” ಹಾಗೂ ನಾನಾ ಸಂಘಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿರುವ ಸ್ವಚ್ಚತಾ ಕಾರ್ಯದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತೊಡಗಿಕೊಂಡರು. ಸ್ವತಃ ಕಸ ಗುಡಿಸಿ ಅದನ್ನು ಕಸ ಸಂಗ್ರಹಿಸುವ ವಾಹನಕ್ಕೆ ಸುರಿಯುವ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಪ್ರೇರಣೆ ನೀಡಿದರು.

ಇದಕ್ಕೂ ಮುನ್ನ ಅರಮನೆ ಸಮೀಪ ಹಮ್ಮಿಕೊಂಡಿದ್ದ “ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೈಸೂರು ನಗರದಲ್ಲಿ ಸ್ವಚ್ಛತೆ ಕಾಪಾಡಲು ಹಮ್ಮಿಕೊಂಡಿರುವ ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರವಾಸಿ ತಾಣಗಳನ್ನು ಕಸ ಮುಕ್ತಗೊಳಿಸಬೇಕು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಈ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಚಿವರು ಕರೆ ಕೊಟ್ಟರು.

ಕಾರ್ಯಕ್ರಮದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related