ಉತ್ತರ ಕರ್ನಾಟಕದಲ್ಲಿ ನಮೋ ಅಬ್ಬರ

ಉತ್ತರ ಕರ್ನಾಟಕದಲ್ಲಿ ನಮೋ ಅಬ್ಬರ

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಮೊದಲ ಹಂತದಲ್ಲಿ  14 ಕ್ಷೇತ್ರದಲ್ಲಿ ಚುನಾವಣೆ ನಡೆದಿದ್ದು, ಎರಡನೇ ಹಂತದ 14 ಕ್ಷೇತ್ರದಲ್ಲಿ ಚುನಾವಣೆ ಮೇ 07ರಂದು ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ನರೇಂದ್ರ ಮೋದಿಯವರು ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ.

ಹೌದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ 28 ಕ್ಷೇತ್ರಕ್ಕೆ 28 ಕ್ಷೇತ್ರ ಗೆಲ್ಲುವ ಭರವಸೆಯನ್ನು ಹೊಂದಿರುವ ಬಿಜೆಪಿ ಪಕ್ಷಕ್ಕೆ ಬೂಸ್ಟ್ ನೀಡಲು ದೇಶದ ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಏಪ್ರಿಲ್ 28ರಂದು ರಾಜ್ಯಕ್ಕೆ ಆಗಮಿಸಿದ್ದು, ಇಂದು (ಸೋಮವಾರ ಏಪ್ರಿಲ್ 29) ರಂದು ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಪಾರದ ಪ್ರಚಾರವನ್ನು ಕೈಗೊಂಡಿದ್ದಾರೆ.

ಈಗಾಗಲೇ ಉತ್ತರ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ನರೇಂದ್ರ ಮೋದಿಯವರು, ನಿನ್ನೆ ಕೊಪ್ಪಳ, ಹೊಸಪೇಟೆ ಇನ್ನಿತರ ಸ್ಥಳಗಳಿಗೆ ಭೇಟಿ ನೀಡಿ ಪ್ರಚಾರ ಕೈಗೊಂಡಿದ್ದ ಅವರು, ಇಂದು ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರವಾಗಿ ಮತಯಾಚಿಸಲಿದ್ದಾರೆ. ಬಾಗಲಕೋಟೆಯಲ್ಲಿ ಬೃಹತ್​ ಸಮಾವೇಶ ನಡೆಯಲಿದೆ.

Related