ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಮೋ

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಮೋ

ಕಲಬುರಗಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಬಂದಿಳಿದು ಸೊಲ್ಲಾಪುರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸುವ ಪ್ರಯುಕ್ತ ಇಂದು ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇನ್ನು ಕಲಬುರ್ಗಿ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕ್ಯಾಪ್ಟರ್ ನಲ್ಲಿ ಸೊಲ್ಲಾಪುರಕ್ಕೆ ತೆರಳುವ ಮೂಲಕ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದು ಕಲ್ಬುರ್ಗಿ ವಿಮಾನ ನಿಲ್ದಾಣದ ಸುತ್ತಮುತ್ತ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿತ್ತು.

ಭಾರತೀಯ ವಾಯು ಸೇನೆಯ ವಿಮಾನದಲ್ಲಿ ಬೆಳಗ್ಗೆ 9.35 ಕ್ಕೆ ನಗರದಲ್ಲಿ ಲ್ಯಾಂಡ್ ಆದ ಪ್ರಧಾನಿ ಮೋದಿ ಕೂಡಲೇ ಅಂದರೆ 9.40ಕ್ಕೆ ಸೇನೆಯ ಹೆಲಿಕ್ಪಾಪ್ಟರ್ ವೊಂದರ ಮೂಲಕ ಸೋಲಾಪುರಗೆ ತೆರಳಿದರು. ಅವರ ಆಗಮನದ ಹಿನ್ನೆಲೆ ಭದ್ರತೆ ದೃಷ್ಟಿಯಿಂದ ಕಲಬುರಗಿಯ ಜಿಲ್ಲಾಧಿಕಾರಿ ಫೌಜಿಯ ತರನ್ನುಮ್ ವಿಮಾನ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆ ಪ್ರತಿಬಂಧಕಾಜ್ಞೆ ವಿಧಿಸಿದ್ದಾರೆ. ಸೋಲಾಪುರದಿಂದ ಮಧ್ಯಾಹ್ನ 1 ಗಂಟೆಗೆ ಕಲಬುರಗಿಗೆ ವಾಪಸ್ಸಾಗಲಿರುವ ಪ್ರಧಾನಿ ಮೋದಿ 1.05 ಕ್ಕೆ ವಾಯುಪಡೆಯ ಅದೇ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Related