ನಮೋ ಭೇಟಿಯಾದ ಸಿಎಂ

ನಮೋ ಭೇಟಿಯಾದ ಸಿಎಂ

ದೆಹಲಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಇಂದು ಭೇಟಿಯಾಗಿದ್ದು, ರಾಜ್ಯದಲ್ಲಿ ಬರ ಪೀಡಿತ ಪರಿಹಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಗೆ ಮನವಿ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.

ಈ ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಮಳೆಯಾಗದಿದ್ದ ಕಾರಣ ಈ ಬಾರಿ ಬರಗಾಲ ಕಾಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ.

ಹೌದು, ಇಂದು (ಡಿ.18 ಮಂಗಳವಾರ) ಸಂಸತ್​ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬರ ಪರಿಹಾರಕ್ಕೆ ಕೇಂದ್ರದಿಂದ ಒಂದು ಪೈಸೆಯೂ ಬಿಡುಗಡೆಯಾಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿಯನ್ನು ಟೀಕಿಸಿದ್ದರು. ಜೊತೆಗೆ ನಮ್ಮ ಸಚಿವರು ಭೇಟಿ ಮಾಡಲು ಯತ್ನಿಸಿದರೂ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಹೇಳಿದ್ದರು. ಸದ್ಯ ಪ್ರಧಾನಿಯವರು ಸಿಎಂ ಸಿದ್ದರಾಮಯ್ಯರಿಗೆ ಭೇಟಿಗೆ ಅವಕಾಶ ನೀಡಿದ್ದು ಸಿದ್ದರಾಮಯ್ಯ ಮೋದಿಯವರನ್ನು ಭೇಟಿ ಮಾಡಿ ಬರದ ಬಗ್ಗೆ ಚರ್ಚೆ ಮಾಡಿದ್ದಾರೆ. ಕರ್ನಾಟಕವು ಕೇಂದ್ರದಿಂದ 18,171.44 ಕೋಟಿ ರೂಪಾಯಿ ಬರ ಪರಿಹಾರ ಕೋರಿದೆ.

 

Related