ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

ನವದೆಹಲಿ: ದೇಶದಾದ್ಯಂತ ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕಾರಕ್ಕೆ ಬರುತ್ತದೆ ಎಂಬ ಮಾಹಿತಿ ಈಗಾಗಲೇ ಹೊರಗಿತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಪ್ರಧಾನಿ ಹುದ್ದೆಗೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಹೌದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಚಂದ್ರಬಾಬು ನಾಯ್ಡುರನ್ನು ಸನ್ಮಾನಿಸಿದ ಪವನ್‌ ಕಲ್ಯಾಣ್‌

ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊಮ್ಮಿರುವ ಎನ್‌ಡಿಎ ಸರಕಾರ ರಚನೆಯ ಹಕ್ಕು ಮಂಡಿಸಬೇಕಿದೆ. ಮಿತ್ರಪಕ್ಷಗಳ ಜೊತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

 

 

Related