ನ್ಯಾಷನಲ್ ಕ್ರಶ್ ರಶ್ಮಿಕ ಮಂದಣ್ಣ ನಿಶ್ಚಿತಾರ್ಥ!?

ನ್ಯಾಷನಲ್ ಕ್ರಶ್  ರಶ್ಮಿಕ ಮಂದಣ್ಣ ನಿಶ್ಚಿತಾರ್ಥ!?

ಬೆಂಗಳೂರು: ನ್ಯಾಷನಲ್ ಕ್ರಶ್ ಎಂದೇ ಖ್ಯಾತಿಯನ್ನು ಹೊಂದಿರುವ ನಟಿ ರಶ್ಮಿಕ ಮಂದಣ್ಣ ಮತ್ತು ತೆಲುಗು ನಟ ವಿಜಯ್ ದೇವರಕೊಂಡ ಅವರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇದರ ಬಗ್ಗೆ ರಶ್ಮಿಕ ಮತ್ತು ವಿಜಯ್ ಯಾವುದೇ ಕಾರಣಕ್ಕೂ ತಮ್ಮ ಮೌನವನ್ನು ಮುರಿದಿಲ್ಲಿ. ರಶ್ಮಿಕ ಮತ್ತು ವಿಜಯ್ ಅವರು 2024 ಫೆಬ್ರವರಿ ತಿಂಗಳಲ್ಲಿ ತಮ್ಮ ನಿಶ್ಚಿತಾರ್ಥ ಮಾಡಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದರು ಕೂಡಾ ಇದರ ಬಗ್ಗೆ ಇಬ್ಬರು ಕೂಡ ಯಾವುದೇ ಒಂದು ಮಾಹಿತಿಯನ್ನು ಹಂಚಿಕೊಂಡಿಲ್ಲ.

ಹೌದು, ಇದೇ ಫೆಬ್ರವರಿ ತಿಂಗಳ ಎರಡನೇ ವಾರದಲ್ಲಿ ಇಬ್ಬರೂ ತಮ್ಮ ನಿಶ್ಚಿತಾರ್ಥದ ಬಗ್ಗೆ ಅನೌನ್ಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಜೋಡಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ತೆಲುಗು ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ನಡೆಸುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಈ ಬಗ್ಗೆ ಇಬ್ಬರು ತುಟಿ ಬಿಚ್ಚದಿದ್ದರೂ ಅವರ ನಡುವಿನ ಒಡನಾಟ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಕಳೆದ ಕೆಲವು ದಿನಗಳಿಂದ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥದ ಬಗ್ಗೆ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

 

Related