ರಾಷ್ಟ್ರೀಯ ಶಿಕ್ಷಣ ನೀತಿಯು ದೇಶಕ್ಕೆ ಬಲ : ಡಿಸಿಎಂ

ರಾಷ್ಟ್ರೀಯ ಶಿಕ್ಷಣ ನೀತಿಯು ದೇಶಕ್ಕೆ ಬಲ : ಡಿಸಿಎಂ

ಬೆಂಗಳೂರು : ಜಗತ್ತು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊAಡು ಸುಧಾರಣೆ ತರಲು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ನಾವು ಜಾಗತಿಕ ಮಟ್ಟದ ಸ್ಪರ್ಧೆ ಎದುರಿಸುತ್ತಿದ್ದೇವೆ. ಅದಕ್ಕೆ ಪೂರಕವಾಗಿ ಶಿಕ್ಷಣ ವ್ಯವಸ್ಥೆ ಕೂಡ ಬದಲಾಗಬೇಕಿದೆ. ಮಗುವಿನ ಮೂರನೇ ವರ್ಷದಿಂದಲೇ ಶಿಕ್ಷಣ ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶಕ್ಕೆ ಬಲ ತುಂಬಲಿದೆ’ ಎಂದರು.

ಸಮಾರಂಭ  ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಸ್ವಾಮಿ ವಿವೇಕಾನಂದ ಅವರ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಂಡರೆ ದೇಶ ಜಗತ್ತಿನಲ್ಲೇ ಮುಂಚೂಣಿಯಲ್ಲಿ ನಿಲ್ಲುತ್ತದೆ’ ಎಂದರು.

Related