ಬೆಂಗಳೂರು: ಭಾರತ ಚುನಾವಣಾ ಆಯೋಗ – ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ವತಿಯಿಂದ ನಗರದ ಸರ್ ಪುಟ್ಟಣ್ಣ ಚೆಟ್ಟಿ ಪುರಭವನ (ಟೌನ್ ಹಾಲ್) ದಲ್ಲಿ “ರಾಷ್ಟ್ರೀಯ ಮತದಾರರ ದಿನಾಚರಣೆ-2025” ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಗೌರವಾನ್ವಿತ ರಾಜ್ಯಪಾಲರುಗಳಾದ ಥಾವರ್ ಚಂದ್ ಗೆಹ್ಲೋಟ್ ರವರು ಆಗಮಿಸಿ ಚಾಲನೆ ನೀಡಿದರು.
ಮೊದಲನೆ ಬಾರಿ ಮತದಾನ ಮಾಡುವ ಯುವ ಮತದಾರರು, ವಿಕಲ ಚೇತನರು, ತೃತೀಯ ಲಿಂಗಿಗಳು ಹಾಗೂ ಬುಡಕಟ್ಟು ಜನಾಂಗದವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಇದೇ ವೇಳೆ ಬ್ಯಾಡ್ಜ್ ವಿತರಿಸಲಾಯಿತು.
ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸಭಾಂಗಣಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳು, ವಿದ್ಯಾರ್ಥಿಗಳು ಸೇರಿದಂತೆ 1500ಕ್ಕೂ ಹೆಚ್ಚು ಮಂದಿ ಮತದನಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಇದನ್ನೂ ಓದಿ: ಲಾಯರ್ ಜಗದೀಶ್ ಮೇಲೆ ಭೀಕರ ಹಲ್ಲೆ
ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಇನ್ನಿತರೆ ವಿಷಯಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದಂತಹ ಅಧಿಕಾರಿಗಳಿಗೆ ರಾಜ್ಯಮಟ್ಟದ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಹಾಗೂ ಪಾರಿತೋಷಕವನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿಯಾದ ಶ್ರೀ ಮನೋಜ್ ಕುಮಾರ್ ಮೀನಾ, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾದ ಕುರುಮರಾವ್, ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳು, ಸ್ವೀಪ್ ನೋಡಲ್ ಅಧಿಕಾರಿ ಪಿ.ಎನ್ ವಸ್ತ್ರದ್ ಸೇರಿದಂತೆ ಇನ್ನಿತರೆ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.
