Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಣ ಕೈಯಲ್ಲಿ ಇದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ
  • Bangalore
  • Politics
  • State

ಹಣ ಕೈಯಲ್ಲಿ ಇದ್ದರೂ ಸ್ಕಾಲರ್ ಶಿಪ್ ವಿತರಣೆಯಲ್ಲಿ ನಿರ್ಲಕ್ಷ್ಯ

admin January 7, 2025 1 minute read
Spread the love

ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗೃಹ ಕಚೇರಿ ಕೃಷ್ಣದಲ್ಲಿ ಎರಡೂವರೆ ಗಂಟೆ ಕಾಲ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡು ಸ್ಪಷ್ಟ ಸೂಚನೆ ನೀಡಿದರು.

ವರ್ಷದ ಕೊನೆ ತಿಂಗಳಲ್ಲೇ ಖರ್ಚು ಮಾಡುವ ಅಸಹ್ಯ ಅಭ್ಯಾಸ ಬೆಳೆಸಿಕೊಂಡಿದ್ದೀರಿ. ಬಡವರಿಗೆ, ಅರ್ಹ ಫಲಾನುಭವಿಗಳಿಗೆ ಹಂಚಲು ಕೊಟ್ಟ ಹಣವನ್ನು ಖರ್ಚು ಮಾಡದೆ ಇಟ್ಟುಕೊಂಡು ಕೂರುವುದಕ್ಕಾ ನೀವು ಇರುವುದು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚಿಸಿದರು.

2024-25 ನೇ ಸಾಲಿನಲ್ಲಿ ಆಯವ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ರೂ. 5,377 ಕೋಟಿ ಅನುದಾನ ಒದಗಿಸಲಾಗಿದೆ. ಇದುವರೆಗೆ ಅನುದಾನ ರೂ.3,631 ಕೋಟಿ ಬಿಡುಗಡೆಯಾಗಿದ್ದು ಈ ಹಣ ಕೂಡ ಪೂರ್ತಿ ಖರ್ಚು ಮಾಡದ ಬಗ್ಗೆ ತೀವ್ರವಾಗಿ ಪ್ರಶ್ನಿಸಿದರು. ಜೊತೆಗೆ ಅಂಬೇಡ್ಕರ್ ನಿಗಮದಲ್ಲಿ 900 ಕೋಟಿ, ಭೋವಿ ನಿಗಮದಲ್ಲಿ 107 ಕೋಟಿ ಸೇರಿ ಎಲ್ಲಾ ನಿಗಮಗಳಲ್ಲಿ ನೂರಾರು ಕೋಟಿ ಹಣ ಇದ್ದರೂ ಖರ್ಚು ಮಾಡದ ನಿಗಮದ  ಎಂಡಿ ಗಳಿಗೆ ನೋಟಿಸ್ ನೀಡಿ, ಅಗತ್ಯ ಬಿದ್ದರೆ ಸಸ್ಪೆಂಡ್ ಮಾಡುವಂತೆ ಖಡಕ್ ಸೂಚನೆ ನೀಡಿದರು.

ಇಲಾಖೆಗೆ ಸರ್ಕಾರದಿಂದ ಕೊಟ್ಟ ಹಣದಲ್ಲಿ 2,892 ಕೋಟಿ ಮಾತ್ರ ವೆಚ್ಚ ಮಾಡಲಾಗಿದೆ. ಉಳಿದದ್ದು ಹಾಗೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಮಾರ್ಚ್‌ ಅಂತ್ಯದ ವರೆಗೆ ಕಾಯದೆ ಆಯವ್ಯಯದಲ್ಲಿ ಒದಗಿಸಿರುವ ಅನುದಾನ ಸಮರ್ಪಕವಾಗಿ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ‘ಗೃಹಲಕ್ಷ್ಮಿ’ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ ಜಾರಿ

ವಿದ್ಯಾರ್ಥಿ ವೇತನ ಪಾವತಿಯನ್ನು ವರ್ಷದ ಅಂತ್ಯದವರೆಗೆ ಬಾಕಿಯುಳಿಸಬಾರದು. ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನವನ್ನು ಪ್ರತಿ ವರ್ಷ ಸೆಪ್ಟಂಬರ್‌ ಒಳಗಾಗಿ, ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನವನ್ನು ನವೆಂಬರ್‌ ಅಂತ್ಯದ ಒಳಗಾಗಿ ಪಾವತಿಗೆ ಕ್ರಮ ಕೈಗೊಳ್ಳಬೇಕು. ಆಧಾರ್‌ ಆಗದಿರುವ ಕಾರಣಕ್ಕೆ ವಿದ್ಯಾರ್ಥಿ ವೇತನದಲ್ಲಿ ವಿಳಂಬವಾಗಬಾರದು. ಎಲ್ಲಾ ವಿದ್ಯಾರ್ಥಿಗಳಿಗೆ ಆಧಾರ್‌ ಮಾಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ವೇತನಕ್ಕೆ ರೂ.164 ಕೋಟಿ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ ರೂ.105 ಕೋಟಿ ವೆಚ್ಚ ಮಾಡಲಾಗಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ರೂ.230 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೇ.100ರಷ್ಟು ಪ್ರಗತಿ ಸಾಧಿಸಲಾಗಿದೆ.

ಇನ್ನು ಎಲ್ಲಾ ಹೋಬಳಿಗಳಲ್ಲಿ ವಸತಿ ಶಾಲೆಗಳ ಸ್ಥಾಪನೆ ಸರ್ಕಾರದ ಗುರಿಯಾಗಿದೆ. ಈ ವರ್ಷ 20 ಹೊಸ ವಸತಿ ಶಾಲೆಗಳನ್ನು ಆರಂಭಿಸಲಾಗಿದ್ದು, ರಾಜ್ಯದಲ್ಲಿ ಒಟ್ಟು 841 ವಸತಿ ಶಾಲೆಗಳು ಇವೆ. ಇನ್ನು 92 ಹೋಬಳಿಗಳಲ್ಲಿ ವಸತಿ ಶಾಲೆ ಆರಂಭಿಸಬೇಕಾಗಿದ್ದು, ಮುಂದಿನ ಎರಡು ವರ್ಷಗಳಲ್ಲಿ ಇದನ್ನು ಪೂರ್ಣಗೊಳಿಸಬೇಕು ಎಂದರು.

ಹೊಸದಾಗಿ ಆರಂಭಿಸಲಾಗಿರುವ ಎಲ್ಲಾ 20 ವಸತಿ ಶಾಲೆಗಳಲ್ಲಿ ಶಿಕ್ಷಕರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು .

ಎಲ್ಲಾ ಮಂಜೂರಾದ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಶಿಕ್ಷಕರಿಗೆ ನಿರಂತರ ತರಬೇತಿ ನೀಡಬೇಕು. ಮತ್ತು ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಬೇಕು. ಪ್ರಸ್ತುತ ರಾಜ್ಯದಲ್ಲಿ 70 ಪಿಯು ವಸತಿ ಶಾಲೆಗಳಿದ್ದು, ಪ್ರತಿ ತಾಲೂಕು ಮಟ್ಟದಲ್ಲಿ ಕನಿಷ್ಠ ಒಂದು ಪಿಯು ವಸತಿ ಶಾಲೆ ಆರಂಭಿಸಬೇಕು.

ಎಲ್ಲಾ ವಸತಿ ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆಗಳಿಗೆ ವ್ಯವಸ್ಥೆ ಮಾಡಬೇಕು. ಸ್ಥಳಾವಕಾಶ ಇದ್ದ ಕಡೆ ಕ್ರೀಡಾಂಗಣ ನಿರ್ಮಿಸಲು ಕ್ರಮ.  841 ವಸತಿ ಶಾಲೆಗಳ ಪೈಕಿ 640 ವಸತಿಶಾಲೆಗಳಿಗೆ ಸ್ವಂತ ಕಟ್ಟಡಗಳಿದ್ದು, 90 ನಿರ್ಮಾಣ ಹಂತದಲ್ಲಿವೆ.

ವಸತಿ ಶಾಲೆ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿಯನ್ನು ಆದ್ಯತೆ ಮೇರೆಗೆ ನೀಡಲು ವ್ಯವಸ್ಥೆ ಮಾಡಬೇಕು. ಎಲ್ಲಾ ವಸತಿ ಶಾಲೆಗಳಲ್ಲಿ ಊಟದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಹಾಸಿಗೆ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದರು.

 

 

About the Author

admin

Administrator

Visit Website View All Posts

Spread the love

Post navigation

Previous: ‘ಗೃಹಲಕ್ಷ್ಮಿ’ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ ಜಾರಿ
Next: ಔತಣಕೂಟಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.