ನೇಹಾ ಹತ್ಯೆ ಪ್ರಕರಣ; ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ನೇಹಾ ಹತ್ಯೆ ಪ್ರಕರಣ; ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ನೇಹಾ ಹಿರೇಮಠ ಹತ್ಯೆಯನ್ನು ಖಂಡಿಸಿ ಇಂದು ರಾಜ್ಯದಾದ್ಯಂತ ಬಿಜೆಪಿ ಪಕ್ಷವು ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಕೈಗೊಂಡಿದೆ.

ಹಾಡಹಗಲೇ ಕಾಲೇಜು ಆವರಣದಲ್ಲಿ ನೇಹಾ ಹತ್ಯ ನಡೆದಿದ್ದರೂ ಕೂಡ ಕಾಂಗ್ರೆಸ್ ಸರ್ಕಾರ ಈ ಹತ್ಯೆ ಬಗ್ಗೆ ತೀರವಾಗಿ ತನಿಖೆ ನಡೆಸುತ್ತಿಲ್ಲವೆಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ನಾಯಕರುಗಳು ರಾಜ್ಯದಾದ್ಯಂತ ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.

ನೇಹಾ ಪ್ರತಿಭಟನೆಗೆಂದು ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದು ಮಾಡಿ ಬೆಳಿಗ್ಗೆ 8ಗಂಟೆಯಿಂದ ಮಧ್ಯಾಹ್ನ 3:00 ವರೆಗೂ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನು ನೇಹಾ ಹತ್ಯೆಯು ದಿನಕ್ಕೊಂದು ತಿರುವನ್ನು ಪಡೆಯುತ್ತಿದ್ದು, ಬಿಜೆಪಿ ಪಕ್ಷದವರು ಇದು ಲವ್ ಜಿಹಾದ್ ಎಂದು ಆರೋಪಿಸುತ್ತಿದ್ದಾರೆ. ಇನ್ನು ಕೆಲವರು ನೇಹಾ ಮತ್ತು ಆರೋಪಿ ಫೈಯಾಜ್ ಒಬ್ಬರಿಗೊಬ್ಬರು ಪ್ರೀತಿ ಮಾಡುತ್ತಿದ್ದರು ಎಂದು ಹೇಳುತ್ತಿದ್ದಾರೆ. ಆದರೆ ಇದರ ಬಗ್ಗೆ ನಿಖರ ಮಾಹಿತಿ ಇಲ್ಲಿಯವರೆಗೂ ತನಿಖೆಯಾಗಿಲ್ಲವೆಂದು ಬಿಜೆಪಿ ನಾಯಕರು ಪ್ರತಿಭಟನೆ ಇಳಿದಿದ್ದಾರೆ.

ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಂಘಟನೆಗಳು ಬಂದ್ ಗೆ ಕರೆ ನೀಡಿ ಪ್ರತಿಭಟನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿವೆ. ಹುಬ್ಬಳ್ಳಿಯ ಅಂಜುಮನ್ ಸಂಸ್ಥೆ ನೇಹಾ ಹಿರೇಮಠ ಹತ್ಯೆ ಖಂಡಿಸಿ ಇಂದು ಧಾರವಾಡ ಬಂದ್‌ಗೆ ಕರೆ ನೀಡಿದ್ದಾರೆ. ನೇಹಾ ಹತ್ಯೆ ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಂದ್‌ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದೆ. ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್‌ಗೆ ಬೆಂಬಲ ನೀಡಲಾಯಿತು.

 

Related