ನೇಹಾ ಕೊಲೆ ಪ್ರಕರಣ; ಸತ್ಯ ಬಾಯಿಬಿಟ್ಟ ಆರೋಪಿ ಫೈಯಜ್

ನೇಹಾ ಕೊಲೆ ಪ್ರಕರಣ; ಸತ್ಯ ಬಾಯಿಬಿಟ್ಟ ಆರೋಪಿ ಫೈಯಜ್

ಹುಬ್ಬಳ್ಳಿ: ಏಪ್ರಿಲ್ 18 ಗುರುವಾರ ದಂದು ಇಡೀ ರಾಜ್ಯದ ಜನ ಬೆಚ್ಚಿ ಬೆಳಿಸುವಂತಹ ಘಟನೆ ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದ್ದು, ಎಂಸಿಎ ವಿದ್ಯಾರ್ಥಿನಿ ನೇಹಾಗೆ ಫಯಾಜ್  ಎಂಬ ಯುವಕ ಸುಮಾರು ಹತ್ತು ಸಾರಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ.
ಇನ್ನು ಕೊಲೆಗೆ ಸಂಬಂಧಿಸಿದಂತೆ ಆರೋಪಿ ಫಯಾಜ್ ನನ್ನು 14 ದಿನಗಳ ಬಂಧನದಲ್ಲಿರಿಸಿದ್ದು ತನಿಖೆ ವೇಳೆ ಆರೋಪಿ ಫಯಾಜ್ ಸತ್ಯವನ್ನು ಬಾಯಿಬಿಟ್ಟಿದ್ದಾನೆ.

ಘಟನೆ ನಡೆಯುವುದಕ್ಕೂ ಮುಂಚೆಯೇ ಕಾಲೇಜು ಬಿಟ್ಟಿದ್ದೆ. ಒಂದು ವಾರದ ಹಿಂದೆ ಕಾಲೇಜ್​ಗೆ ಹೋಗಿ ನೇಹಾಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು (ನೇಹಾ) ನಿನ್ನ ಜೊತೆ ಮಾತನಾಡಲು ಇಷ್ಟ ಇಲ್ಲ ಅಂತ ಅವೈಡ್ ಮಾಡಿ, ಹೊರಟು ಹೋದಳು.

“ಏಪ್ರಿಲ್​ 18 ರಂದು ಅವಳು ಪರೀಕ್ಷೆ ಬರೆಯಲು ಬಿವಿಬಿ ಕಾಲೇಜಿಗೆ ಬಂದಿದ್ದಳು. ನಾನು (ಫಯಾಜ್​) ಮತ್ತೆ ಅಂದು ಕಾಲೇಜಿಗೆ ಹೋದೆ. ಪರೀಕ್ಷೆ ಮುಗಿಯುವವರೆಗೂ ಕಾಯ್ದೆ. ಪರೀಕ್ಷೆ ಮುಗಿದ ಬಳಿಕ ಹೊರಗೆ ಬಂದ ಅವಳನ್ನು ಮಾತನಾಡಿಸಲು ಯತ್ನಿಸಿದೆ. ಆದರೆ ಅವಳು ಮಾತಾಡಲ್ಲ ಅಂದಳು. ಹೀಗಾಗಿ ಅವಳಿಗೆ ಚಾಕುವಿನಿಂದ ಹತ್ತು ಬಾರಿ ಚುಚ್ಚಿದೆ. ಅವಳಿಗೆ ಚಾಕು ಹಾಕುವ ವೇಳೆ ನನ್ನ ಎರಡು ಕೈ ಬೆರಳುಗಳಿಗೆ, ಕಾಲಿಗೂ ಗಾಯವಾಗಿದೆ. ಏನಾಗಿದೆ ಅನ್ನೋದು ಗೊತ್ತಿಲ್ಲ, ಅವಳು ಮಾತಾಡಲ್ಲ ಅಂದಳು ನಾನು ಚಾಕು ಹಾಕಿದ್ದೇನೆ” ಎಂದು ಕಾರಾಗೃಹ ಸಿಬ್ಬಂದಿ ಎದುರು ಫಯಾಜ್​ ಹೇಳಿದ್ದಾನೆ.

Related