ನೇಹಾ ಕೊಲೆ; ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ

ನೇಹಾ ಕೊಲೆ; ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದು ವಿಪಕ್ಷ ನಾಯಕರುಗಳು ಆಡಳಿತ ಪಕ್ಷಗಳ ಮೇಲೆ ಆರೋಪ ಮಾಡುತ್ತಿದ್ದಾರೆ.

ಏಪ್ರಿಲ್ 18ರಂದು ನಡೆದ ನೇಹಾ ಕೊಲೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಗೃಹ ಸಚಿವ ಪರಮೇಶ್ವರವರು ವಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದೆ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಮತ್ತು ಪರಮೇಶ್ವರವರ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಸುಶಿಕ್ಷಿತರು, ವಿದೇಶದಲ್ಲಿ ಓದಿದವರು ಹಾಗೂ ನಾಡಿನ ಗೃಹಮಂತ್ರಿ ಸಾಹೇಬರಾದ ಡಾ. ಜಿ. ಪರಮೇಶ್ವರ್, ಹುಬ್ಬಳ್ಳಿಯಲ್ಲಿ ವಿಕೃತಪ್ರೇಮಿಗೆ ಬಲಿಯಾದ ವಿದ್ಯಾರ್ಥಿನಿ ಬಗ್ಗೆ ಬೇಜವಾಬ್ದಾರಿತನದಿಂದ ನಾಲಿಗೆ ಜಾರಿಬಿಟ್ಟು ಕಾಂಗ್ರೆಸ್ ಸಂಸ್ಕೃತಿಯನ್ನು ಜಗಜ್ಜಾಹೀರು ಮಾಡಿದ್ದಾರೆ. ಅವರಿಗೆ ನಮ್ಮ ಧಿಕ್ಕಾರ! ಕೊಲೆಯಾದ ನತದೃಷ್ಟ ಯುವತಿ ಹಾಗೂ ಕೊಲೆಗಾರ ಫಯಾಜ್ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಕೊಲೆ ಪ್ರಕರಣದ ತನಿಖೆಯ ದಿಕ್ಕು ತಪ್ಪಿಸಲೆತ್ನಿಸಿದ ಮಂತ್ರಿಗಳು, ಅತ್ಯಂತ ಅಸೂಕ್ಷ್ಮವಾಗಿ ಹೇಳಿಕೆ ನೀಡಿದ್ದಾರೆ ಎಂದು ಖಂಡಿಸಿದೆ.

Related