3ನೇ ವ್ಯಕ್ತಿ ಜೊತೆ ನಿವೇದಿತಾ ಹೆಸರು ತಳುಕು; ಚಂದನ್ ಶೆಟ್ಟಿ ಹೇಳಿದ್ದೇನು…?

3ನೇ ವ್ಯಕ್ತಿ ಜೊತೆ ನಿವೇದಿತಾ ಹೆಸರು ತಳುಕು; ಚಂದನ್ ಶೆಟ್ಟಿ ಹೇಳಿದ್ದೇನು…?

ಬೆಂಗಳೂರು: ನಿವೇದಿತಾ ಗೌಡ ಮತ್ತು ಚಂದನ್ ಶೆಟ್ಟಿ ಅವರು ಈಗಾಗಲೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇವರಿಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ನಿವೇದಿತಾ ಗೌಡ ಅವರಿಗೆ ಬೇರೆ ಅವರ ಹೆಸರು ತಳಕುಗುಂಡಿದೆ ಎಂಬ ಮಾಹಿತಿ ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇನ್ನು ಇದರ ಬಗ್ಗೆ ಚಂದನ್ ಶೆಟ್ಟಿ ಅವರು ತಮ್ಮ ಮೌನ ಮುರಿದಿದ್ದಾರೆ.

ಹೌದು, ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಇವತ್ತು ಇಂದು ಜೂನ್ 10ರಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ.

ನಿವೇದಿತಾ ಗೌಡ ಅವರು ನಡೆಸಿದ್ದಾರೆ. ಮೂರನೇ ವ್ಯಕ್ತಿಯ ಜೊತೆ ನಿವೇದಿತಾ ಗೌಡ ಅವರ ಹೆಸರು ತಳುಕು ಹಾಕಿಕೊಂಡಿದೆ. ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ನಾನಾ ಬಗೆಯ ಪೋಸ್ಟ್​ಗಳು ಹರಿದಾಡುತ್ತಿವೆ. ಆ ಬಗ್ಗೆ ಮಾಜಿ ದಂಪತಿ ಸ್ಪಷ್ಟನೆ ನೀಡಿದ್ದಾರೆ.

ಒಬ್ಬ ಮೂರನೇ ವ್ಯಕ್ತಿಯನ್ನು ನಿವೇದಿತಾ ಹೆಸರಿಗೆ ಸೇರಿಸಿ ಸಂಬಂಧ ಕಲ್ಪಿಸಿದ್ದು ನನ್ನ ಮನಸ್ಸಿಗೆ ತುಂಬ ಬೇಸರ ಆಗಿದೆ. ಯಾಕೆಂದರೆ ಆ ವ್ಯಕ್ತಿಯ ಮನೆಗೆ ನಾನು ಕೂಡ ಅನೇಕ ಬಾರಿ ಹೋಗಿದ್ದೇನೆ. ತುಂಬ ಒಳ್ಳೆಯ ಕುಟುಂಬ ಅವರದ್ದು. ಅವರ ಮನೆಗೆ ಹೋಗುವುದು ನನಗೂ ಖುಷಿ ಆಗುತ್ತಿತ್ತು. ಅವರ ಕಾರ್ಯಕ್ರಮಕ್ಕೆ ನಾವಿಬ್ಬರು ಅನೇಕ ಬಾರಿ ಹೋಗಿದ್ದೆವು. ಆ ವ್ಯಕ್ತಿಯ ಜೊತೆ ನಿವೇದಿತಾ ಗೌಡ ಅವರ ಹೆಸರು ಸೇರಿಸುವಂತಹ ವಿಕೃತ ಮನಸ್ಥಿತಿ ನಮ್ಮ ಕನ್ನಡಿಗರಾದ್ದಾಗಿರಬಾರದು ಎಂದು ಚಂದನ್​ ಶೆಟ್ಟಿ ಹೇಳಿದ್ದಾರೆ.

ಈ ಬಗ್ಗೆ ನಿವೇದಿತಾ ಗೌಡ ಕೂಡ ಮಾತನಾಡಿದ್ದಾರೆ. ‘ಆ ರೀತಿಯ ಪೋಸ್ಟ್​ಗಳನ್ನು ನೋಡಿದಾಗ ನನಗೆ ನೋವಾಯಿತು. ನಾವೆಲ್ಲ ಫ್ಯಾಮಿಲಿ ಫ್ರೆಂಡ್ಸ್​. ಪ್ರತಿ ವರ್ಷ ಅವರು ನನ್ನ ಜನ್ಮದಿನಕ್ಕೆ ವಿಶ್​ ಮಾಡುತ್ತಾರೆ. ನಾನು ಕೂಡ ಅವರಿಗೆ ವಿಶ್​ ಮಾಡುತ್ತೇನೆ. ಈ ವರ್ಷವೇ ಈ ರೀತಿ ವದಂತಿ ಹಬ್ಬಿದ್ದು ಯಾಕೆ ಅಂತ ಗೊತ್ತಿಲ್ಲ. ಇದರಿಂದ ಅವರ ಫ್ಯಾಮಿಲಿಯವರಿಗೆ ತುಂಬ ನೋವಾಗುತ್ತದೆ. ಲೈಕ್​ಗಾಗಿ ಈ ರೀತಿ ಪೋಸ್ಟ್​ ಮಾಡಬೇಡಿ’ ಎಂದು ನಿವೇದಿತಾ ಗೌಡ ಹೇಳಿದ್ದಾರೆ.

 

Related