ದಸರಾ ವೇಳೆ ಅಹಿತಕರ ಘಟನೆ ನಡೆಯದಂತೆ ಸೂಚನೆ

ದಸರಾ ವೇಳೆ ಅಹಿತಕರ ಘಟನೆ ನಡೆಯದಂತೆ ಸೂಚನೆ

ಮೈಸೂರು,ಅ.14: ಖ್ಯಾತ ಸರೋದ್ ವಾದಕ ರಾಜೀವ್ ತಾರಾನಾಥ್ ಅವರ ಬಳಿಯಲ್ಲಿ ದಸರಾ ಕಾರ್ಯಕ್ರಮ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಸಾಂಸ್ಕೃತಿಕ ನಗರಿಯ ಹೆಸರಿಗೆ ಕಳಂಕ ತರುವ ಕೆಲಸ ಮಾಡಿರುವ ಯಾರೇ ಆಗಿದ್ದರೂ ಸೂಕ್ತ ತನಿಖೆ ನಡೆಸಿ ಅವರ ಮೇಲೆ ಕಠಿಣ ಕ್ರಮ ಜರುಗಿಸಲು ಸೂಚಿಸಲಾಗಿದೆ.

ಸಾಂಸ್ಕೃತಿಕ ಮಹತ್ವವನ್ನು ಹಾಳು ಮಾಡುವ ಇಂತಹ ಸಂಗತಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ ಹಾಗೂ ನಾಡಹಬ್ಬ ದಸರಾದಲ್ಲಿ ಇಂತಹ ಘಟನೆಗಳು ಕಂಡು ಬಂದಲ್ಲಿ ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಬೇಕೆಂದು ಮಾನ್ಯ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪನವರು ಈ ಮೂಲಕ ತಿಳಿಸಿರುತ್ತಾರೆ

Related