ಲಸಿಕೆ ಬಗ್ಗೆ ಯಾವುದೇ ಆತಂಕ ಬೇಡ : ಸಚಿವ

ಲಸಿಕೆ ಬಗ್ಗೆ ಯಾವುದೇ ಆತಂಕ ಬೇಡ : ಸಚಿವ

ಹುಬ್ಬಳ್ಳಿ : ಕೊರೋನಾ ಲಸಿಕೆಯನ್ನು ಬಳಕೆಗೆ ನೀಡಲಾಗಿದ್ದು, ಈ ಬಗ್ಗೆ ಆತಂಕ ಬೇಡ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರ ಎಲ್ಲ ರೀತಿ ಪರೀಕ್ಷೆ ಮಾಡಿಯೇ ಅನುಮತಿ ಕೊಟ್ಟಿದೆ. ಅದು ಸುರಕ್ಷಿತವಾಗಿದೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಲಸಿಕೆ ಪಡೆದ ವ್ಯಕ್ತಿ ಮೃತಪಟ್ಟ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸ್ಪಷ್ಟನೆ ಗೊತ್ತಾಗಲಿದೆ ಎಂದು ಹೇಳಿದರು.

ಇನ್ನೂ ನೂತನ ಸಚಿವರಿಗೆ ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯೆ ನೀಡಿದ ಸುಧಾಕರ್. ಸಿ.ಎಂ ಯಡಿಯೂರಪ್ಪ ಅವರಿಗೆ ಆಡಳಿತದ ಅನುಭವವಿದೆ. ಅಸಮಾಧಾನಗೊಂಡವರಿಗೆ ಶಮನ ಮಾಡುವುದು ಅವರಿಗೆ ಗೊತ್ತು. ಯಾರಿಗೆ ಯಾವ ಸ್ಥಾನ ಕೊಡಬೇಕು ಎಂದು ಸಹ ಗೊತ್ತು ಎಂದರು.

Related