ನಟ ಉಪೇಂದ್ರಗೆ ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್

ನಟ ಉಪೇಂದ್ರಗೆ ತಕ್ಷಣ ವಿಚಾರಣೆಗೆ ಹಾಜರಾಗಲು ನೋಟಿಸ್

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ತಮ್ಮದೇ ಆದ ನಟನೆ ಮತ್ತು ನಿರ್ದೇಶನದಿಂದ ಎಲ್ಲಾ ಪ್ರೇಕ್ಷಕರ ಅಭಿಮಾನ ಗಳಿಸಿದ್ದಾರೆ.

ಆದರಿಗ ನಟ ಉಪೇಂದ್ರ ಅವರಿಗೆ ಸಂಕಷ್ಟ ಎದುರಾಗಿದ್ದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಿದ್ದಾರೆ. ಹೌದು, ನಟ ಉಪೇಂದ್ರ ಅವರ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಆಗಸ್ಟ್ 13ರಂದು ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈಗ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದೆ. ತಪ್ಪಿನ ಅರಿವಾದ ಬಳಿಕ ಉಪೇಂದ್ರ ಕ್ಷಮೆ ಕೇಳಿದ್ದರು. ಆದರೆ, ಈ ತಪ್ಪನ್ನು ಕೆಲವರು ಮನ್ನಿಸಿಲ್ಲ. ಅವರ ವಿರುದ್ಧ ಕೆಲವರು ಕಾನೂನು ಸಮರ ಸಾರಿದ್ದಾರೆ. ಇದರಿಂದ ನಟನಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚೆಗೆ ಲೈವ್​ನಲ್ಲಿ ಮಾತನಾಡಿದ್ದ ಉಪೇಂದ್ರ ಅವರು ಆಕ್ಷೇಪಾರ್ಹ ಶಬ್ದ ಬಳಕೆ ಮಾಡಿದ್ದರು. ಈ ಶಬ್ದ ಬಳಕೆ ಮಾಡುವಾಗ ಅವರಲ್ಲಿ ಗಂಭೀರತೆ ಇರಲಿಲ್ಲ. ಇದರಿಂದ ದಲಿತ ಸಂಘಟನೆಗಳು ಸಿಟ್ಟಿಗೆದ್ದಿವೆ. ಹಲವು ಕಡೆಗಳಲ್ಲಿ ಉಪ್ಪಿ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಉಪೇಂದ್ರ ವಿರುದ್ಧ ದೂರು ದಾಖಲಾಗಿದೆ. ಆಕ್ಷೇಪಾರ್ಹ ಪದ ಬಳಕೆ ಪ್ರಕರಣದಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರಿಂದ ನಟ ಉಪೇಂದ್ರಗೆ ನೋಟಿಸ್ ಜಾರಿ ಮಾಡಲಾಗಿದೆ.

 

Related