ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ಬಂಧನ‌

ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ಬಂಧನ‌

ಚಿಕ್ಕಮಗಳೂರು: ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದೇ ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ ಆರೋಪಿಯನ್ನು ಪೊಲೀಸರು ಈಗ ಬಂಧಿಸಿದ್ದಾರೆ.

ಹೌದು, ನೂರಾರು ಹೆಣ್ಣು ಮಕ್ಕಳಿಗೆ ಲೈಂಗಿಕ ದೌರ್ಜನ್ಯ ವ್ಯಸಗಿ, ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅವರದೇ ಎನ್ನಲಾದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದ ಪ್ರಜ್ವಲ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ

ಯೆಸ್…ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಮಧ್ಯೆ ಪ್ರಜ್ವಲ್ ರೇವಣ್ಣರ ವಿಡಿಯೋ ಮತ್ತು ಫೋಟೋಗಳನ್ನು ಅಪ್ಲೋಡ್ ಮಾಡಿದ್ದ ಟ್ರೋಲ್ ಪೇಜ್ ಅಡ್ಮಿನ್ ಒಬ್ಬ ನನ್ನು ಪೊಲೀಸರು ಬಂಧಿಸಿದ್ದಾರೆ.

ಕುದುರೆಮುಖ ಠಾಣೆ ಪೊಲೀಸರು ಮೂಡಿಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ ಪ್ರಜ್ವಲ್, ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು.

Related