Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮಾದರಿ ಶಾಲೆ: ಕೆ.ಹೆಚ್ ಮುನಿಯಪ್ಪ
  • Bangalore
  • Front news
  • Politics
  • State

ಪ್ರತಿ ಗ್ರಾಮ ಪಂಚಾಯಿತಿಗೆ ಒಂದು ಮಾದರಿ ಶಾಲೆ: ಕೆ.ಹೆಚ್ ಮುನಿಯಪ್ಪ

admin July 9, 2025 1 minute read
Spread the love

ದೇವನಹಳ್ಳಿ: ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಒಂದು ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಬ್ರಿಗೇಡ್ ಫೌಂಡೇಷನ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ನಿರ್ಮಿಸಿರುವ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದ ಅವರು, 2023 ಅಕ್ಟೋಬರ್ 02 ರ ಗಾಂಧಿ ಜಯಂತಿ ದಿನದಂದು ಶಾಲೆಗಳ ನವೀಕರಣ ಗುಣಮಟ್ಟದ ವಿಧ್ಯಾಭ್ಯಾಸಕ್ಕೆ ಒತ್ತು ನೀಡಲು ನಮ್ಮ ಸರ್ಕಾರವು ಎಲ್ಲಾ ಖಾಸಗಿ ಸಂಸ್ಥೆಗಳೊಂದಿಗೆ ಒಡಗೂಡಿ ಸಿಎಸ್ಆರ್ ಅನುದಾನದಡಿ ಶಾಲೆಗಳ ಅಭಿವೃದ್ಧಿಗೆ ತೀರ್ಮಾನ ಕೈಗೊಳ್ಳಲಾಯಿತು. ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಮಾಡುವುದು ಸರ್ಕಾರದ ಆಶಯ.

ಎಲ್.ಕೆ.ಜಿ ಯಿಂದ ಪಿಯುಸಿ ವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣವನ್ನು ಬಡವರು, ರೈತರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ನೀಡಬೇಕು ಎಂಬುದು ನಮ್ಮ ತೀರ್ಮಾನ. ಬಹುತೇಕ ಕಂಪನಿಗಳು ಸಿಎಸ್ಆರ್ ಅನುದಾನದಡಿ ಕಾನ್ವೆಂಟ್ ಮಾದರಿ ಶಾಲೆ ಅಭಿವೃದ್ಧಿ ಪಡಿಸಲು ಪಣ ತೊಡಲಾಗಿದೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ: ಸುರ್ಜೇವಾಲ

ಸರ್ಕಾರಿ ಶಾಲೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಕ್ಕಿ ದೇಶ ಸೇವೆಯ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಕಟ್ಟಕಡೆಯ ವಿದ್ಯಾರ್ಥಿಗೂ ಸಮಾನತೆ ಸಿಗಬೇಕು. ಜಗತ್ತಿನ ಬಲಿಷ್ಠ ರಾಷ್ಟ್ರಗಳ ಜೊತೆ ಭಾರತ ಕೊಂಡೊಯ್ಯಲು ವಿದ್ಯಾರ್ಥಿಗಳನ್ನು ತಯಾರು ಮಾಡಬೇಕು. ಹಾಗೇ ನಮ್ಮ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶಾಭಿವೃದ್ದಿ ಯೋಜನಾ ಪ್ರಾಧಿಕಾರದವರು ಸರ್ಕಾರಿ ಶಾಲೆಗಳ ಸುಧಾರಣೆಗೆ ಸಹಕಾರವನ್ನು ನೀಡುತ್ತಿದ್ದಾರೆ.

ಭಾರತರತ್ನ ಪಡೆದಿರುವ ನಮ್ಮ ಸರ್.ಎಂ ವಿಶ್ವೇಶ್ವರಯ್ಯ ಅವರು ಯಾವ ರೀತಿ ಹಂತ ಹಂತವಾಗಿ ಬೆಳೆದು ಇಡೀ ಜಗತ್ತಿಗೆ ಮಾದರಿಯಾದರು, ಅವರು ಶ್ರೇಷ್ಠ ಇಂಜಿನಿಯರ್, ಅವರ ಹೆಸರನ್ನು ಈ ಸಭಾಂಗಣಕ್ಕೆ ಇಟ್ಟಿರುವುದು ತುಂಬಾ ಸಂತೋಷವಾಗಿದೆ. ಹಾಗಾಗಿ ಇವರ ಆದರ್ಶಗಳು ಮತ್ತು ನಡೆದ ಹಾದಿಯನ್ನು ಅರಿತು ವಿದ್ಯಾರ್ಥಿಗಳು ಉನ್ನತ ಮಟ್ಟದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಬೇಕು.

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂದು ಗಾಂಧಿಯವರು ಹೇಳಿರುವ ಮಾತನ್ನು ವಿದ್ಯಾರ್ಥಿಗಳು ಮನದ್ದಟ್ಟು ಮಾಡಿಕೊಳ್ಳಬೇಕು. ಮಕ್ಕಳಿಗೆ ಮೊದಲ ಗುರು ತಂದೆ ತಾಯಿ ನಂತರ ಶಿಕ್ಷಕರು, ಆದ್ದರಿಂದ ಶಿಕ್ಷಕರು ಹೇಳುವ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿ ಸರ್ಕಾರ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ: ಸುರ್ಜೇವಾಲ
Next: ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಲು ಸರ್ಕಾರ ಸಿದ್ಧ..!

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.