ರಾಜ್ಯದಲ್ಲಿ ಆಪರೇಷನ್ ಹಸ್ತ ನಡಿಯೋದು ಪಕ್ಕಾನ?

ರಾಜ್ಯದಲ್ಲಿ ಆಪರೇಷನ್ ಹಸ್ತ ನಡಿಯೋದು ಪಕ್ಕಾನ?

ಮೈಸುರು: ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಜೋರಾಗಿಯೇ ನಡೆಯುತ್ತಿದ್ದು ಇದರ ಬಗ್ಗೆ ಈಗಾಗಲೇ ರಾಜಕೀಯದಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿರುವ ಕಾಂಗ್ರೆಸ್ ಪಕ್ಷವು, ಬಿಜೆಪಿ ನಾಯಕರು ಮತ್ತು ಜೆಡಿಎಸ್ ನಾಯಕರನ್ನು ಆಪರೇಷನ್ ಹಸ್ತದ ಮೂಲಕ ಸೆಳೆಯಲು ಮುಂದಾಗಿದ್ದಾರೆ.

ಹೌದು, ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಗುಸು-ಗುಸು ಚರ್ಚೆ ಶುರುವಾಗಿದ್ದು, ಸುಮಾರು ಹತ್ತರಿಂದ ಹದಿನೈದು ಹಾಲಿ ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರಲು ಒಲವು ತೋರುತ್ತಿದ್ದಾರೆಂದು ತಿಳಿದು ಬರುತ್ತಿದೆ.

ಆಪರೇಷನ್‌ಗೆ ಕಾಂಗ್ರೆಸ್ ಕೈ ಹಾಕಿದೆ ಎನ್ನುವ ಹೊತ್ತಲ್ಲೇ ಯಶವಂತಪುರದಲ್ಲಿ ಭಾರೀ ಬೆಳವಣಿಗೆ ನಡೆದಿದೆ. ಎಸ್‌.ಟಿ ಸೋಮಶೇಖರ್ ನಡೆಸಿದ್ದ ಸಭೆಯಲ್ಲಿ ಕೈ ಶಾಸಕ ಪ್ರತ್ಯಕ್ಷವಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಹೀಗಾಗಿ ಸೋಮಶೇಖರ್​ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ.

ಈ ಬ್ಗಗೆ ಮಾತುಕತೆ ನಡೆಯುತ್ತಿದ್ದು, 10 ರಿಂದ 15 ಹಾಲಿ, ಮಾಜಿ ಶಾಸಕರು ಕಾಂಗ್ರೆಸ್​ ಸೇರಲು ಸಿದ್ಧರಿದ್ದಾರೆ ಎಂದು ಬಾಂಬ್ ಸಿಡಿಸಿದ್ದಾರೆ. ಇನ್ನು ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದೆಂದು ಹೇಳುವ ಮೂಲಕ ಡಿಕೆ ಶಿವಕುಮಾರ್ ಆಪರೇಷನ್ ಗುಟ್ಟು ಬಿಟ್ಟುಕೊಟ್ಟಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಪಕ್ಷ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಇನ್ನೂ ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮಗೊಳ್ಳಲಿದೆ ಎಂದು ಹೇಳಿದ ಅವರು, ಎರಡೂ ಪಕ್ಷದ ಶಾಸಕರು ನಮ್ಮ ಪಕ್ಷಕ್ಕೆ ಬರುವುದು ಖಚಿತ ಎಂಬುದನ್ನು ಸ್ಪಷ್ಟಪಡಿಸಿದರು.

ಯಶವಂತಪುರದ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಕೂಡ ಬಿಜೆಪಿಯನ್ನು ತೊರೆದು ಕಾಂಗ್ರೆಸ್​ ಪಕ್ಷಕ್ಕೆ ಮರಳಲಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಡಿರುವ ಬೆನ್ನಲ್ಲೇ ಚಲುವರಾಯಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಹೇಳಿಕೆ ಸಂಚಲನ ಮೂಡಿಸಿದೆ.

Related