ನಮ್ಮ ನಡೆ ಮತಗಟ್ಟೆಯ ಕಡೆ

ನಮ್ಮ ನಡೆ ಮತಗಟ್ಟೆಯ ಕಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಯುವ ಮತದಾರರನ್ನು ಪ್ರೇರೇಪಿಸಲೆಂದು ಚುನಾವಣಾ ಅಧಿಕಾರಿಗಳು ಹಾಗೂ ಮುಖ್ಯ ಆಯುಕ್ತರಾಗಿರುವ ತುಷಾರ್ ಗಿರಿ ನಾಥ್ ಅವರು ವಿದ್ಯಾರ್ಥಿಗಳಲ್ಲಿ ಮನವರಿಕೆ ಮಾಡಿಕೊಡುತ್ತಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಯುವ ಮತದಾರು  “ನಮ್ಮ ನಡೆ ಮತಗಟ್ಟೆಯ ಕಡೆ” ದ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ವಿದ್ಯಾರ್ಥಿಗಳನ್ನು  ತಿಳಿಸಿದರು.

ಭಾರತ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಜ್ಞಾನಜ್ಯೋತಿ ಸಭಾಂಗದಲ್ಲಿ ಇಂದು ನಡೆದ “ನಮ್ಮ ನಡೆ ಮತಗಟ್ಟೆಯ ಕಡೆ” ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಪ್ರತಿ ಬಾರಿಯ ಚುನಾವಣೆಯಲ್ಲೂ ಕಡಿಮೆ ಮತದಾನ ನಡೆಯುತ್ತದೆ. ಮತಗಟ್ಟೆಗಳ ಬಳಿ ಎಲ್ಲಾ ರೀತಿಯ ವ್ಯವಸ್ಥೆಗಳಿರಲಿದ್ದು, ಈ ಬಾರಿ ಹೆಚ್ಚು ಮತದಾನವಾಗಬೇಕು. ಎಲ್ಲರೂ ಒಟ್ಟಾಗಿ ಇತರರನ್ನೂ ಪ್ರೇರೇಪಿಸಿ ತಪ್ಪದೆ ಮತ ಚಲಾಯಿಸೇಕೆಂದು ತಿಳಿಸಿದರು.

ನಿಮ್ಮ ಅಭ್ಯರ್ಥಿಯನ್ನು ತಿಳಿದುಕೊಳ್ಳಿ(KYC-ECI) ಎಂಬ ತಂತ್ರಾಂಶದಲ್ಲಿ‌ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳ‌ ಮಾಹಿತಿ ಲಭ್ಯಬಿದೆ. ತಾವೆಲ್ಲರೂ ತಂತ್ರಾಂಶವನ್ನು ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಯ ಬಗ್ಗೆ ತಿಳಿದುಕೊಂಡು ಉತ್ತಮ ಅರ್ಭರ್ಥಿಯನ್ನು ಆಯ್ಕೆ ಮಾಡಬಹುದಿ ಎಂದು ಹೇಳಿದರು.

ಚುನಾವಣಾ ರಾಯಬಾರಿ ಹಾಗೂ ಚಿತ್ರ ನಟರಾದ ರಮೇಶ್ ಅರವಿಂದ್ ಮಾತನಾಡಿ, ಒಂದು ಇಟ್ಟಿಗೆಯಿಂದ ಕಟ್ಟಡ ಕಟ್ಟಲು ಸಾಧ್ಯವಿಲ್ಲ. ಸಾವಿರಾರು ಇಟ್ಟಿಗೆಗಳು ಸೇರಿದರೆ ಮಾತ್ರ ಕಟ್ಟಡ ಕಟ್ಟಲು ಸಾಧ್ಯ. ಅದೇ ರೀತಿ ಪ್ರತಿಯೊಂದು ಮತದಾರನೂ ಒಂದೊಂದು‌ ಇಟ್ಟಿಗೆಯ ಹಾಗೆ, ಎಲ್ಲರೂ ಒಟ್ಟಾಗಿ ಸೇರಿದರೆ ಮಾತ್ರ ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಕಾಂತರಾಜು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಲಿಂಗರಾಜು ಗಾಂಧಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಜಿಲ್ಲಾ ಸ್ವೀಪ್‌ ಸಮಿತಿ‌ ನೋಡಲ್ ಅಧಿಕಾರಿಯಾದ ಪ್ರತಿಭಾ, ಬೆಂಗಳೂರು‌ ಕೇಂದ್ರ ಸ್ವೀಪ್ ನೋಡಲ್ ಅಧಿಕಾರಿಯಾದ ರಮಾಮಣಿ, ಇನ್ನಿತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related