ಪಾಕ್ ನಲ್ಲಿ ಭೀಕರ ಅಪಘಾತ

ಪಾಕ್ ನಲ್ಲಿ ಭೀಕರ ಅಪಘಾತ

ಕರಾಚಿ, ಫೆ. 29 : ಪಾಕ್ ನಲ್ಲಿ ಭೀಕರ ಅಪಘಾತವಾಗಿರುವ ಘಟನೆ ನಡೆದಿದೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 20 ಮಂದಿ ಸಾವನ್ನಪ್ಪಿದ್ದು, ಇನ್ನೂ ಕೆಲವರು ಗಾಯಗೊಂಡಿದ್ದಾರೆ. ರೈಲ್ವೆ ಸ್ಟೇಶನ್ ಬಳಿ ದುರ್ಘಟನೆ ನಡೆದಿದೆ. ವೇಗವಾಗಿ ಓಡುತ್ತಿದ್ದ ರೈಲು, ರೈಲ್ವೆ ಕ್ರಾಸಿಂಗ್ ಬಳಿ ಪ್ರಯಾಣಿಕರ ಬಸ್ಗೆ ಡಿಕ್ಕಿ ಹೊಡೆದಿದೆ.
ಸುಕ್ಕೂರ್ ಆಯುಕ್ತ ಶಫೀಕ್ ಅಹ್ಮದ್ ಮಹೇಸರ್ ಅವರು ಘಟನೆ ಬಗ್ಗೆ ಮಾಹಿತಿ ನೀಡಿದ್ದು, 20 ಮಂದಿ ಮೃತಪಟ್ಟಿದ್ದಾಗಿ ದೃಢಪಡಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. 60 ಜನರನ್ನು ಸುಕ್ಕೂರ್ ,ರೊಹ್ರಿ ಆಸ್ಪತ್ರೆಗಳಿಗೆ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.

Related