ಕಾರ್ಮಿಕರ ಸುರಕ್ಷತೆ ಪರಿಶೀಲಿಸಿದ ನಡಹಳ್ಳಿ ಪಾಟೀಲ

ಕಾರ್ಮಿಕರ ಸುರಕ್ಷತೆ ಪರಿಶೀಲಿಸಿದ ನಡಹಳ್ಳಿ ಪಾಟೀಲ

ಮುದ್ದೇಬಿಹಾಳ : ಕೊರೋನಾ ವೈರಸ್‍ನ ಅತೀ ಹೆಚ್ಚು ಪ್ರಕರಣಗಳು ಕಂಡು ಬಂದಿರುವ ಮಹಾರಾಷ್ರ್ಟಕ್ಕೆ ವಲಸೆ ಹೋಗಿದ್ದ ಕಾರ್ಮಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಪಟ್ಟಣದ ಬಸ್ ನಿಲ್ದಾಣಕ್ಕೆ ಹಾಗೂ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ್ದ ಡಿವೈಎಸ್ಪಿ ಈ. ಶಾಂತವೀರ ,ಸಿಪಿಐ ಆನಂದ ವಾಘಮೋಡೆ, ಪಿಎಸೈ ಮಲ್ಲಪ್ಪ ಮಡ್ಡಿ ಅವರೊಂದಿಗೆ ಶಾಸಕರು ಮಹಾರಾಷ್ಟ್ರದಿಂದ ಆಗಮಿಸುವ ವಲಸೆ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ನಡೆಸಿ ಕ್ವಾರಂಟೈನ್‍ನಲ್ಲಿ ಇಡುವ ಮೂಲಕ ಗ್ರಾಮೀಣ ಭಾಗದಲ್ಲಿ ಹುಟ್ಟಿಕೊಳ್ಳುವ ಆತಂಕ ಹಾಗೂ ವಿರೋಧಗಳಿಗೆ ಸೂಕ್ತ ತಿಳಿವಳಿಕೆ ನೀಡಿ ಹದಿನಾಲ್ಕು ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಲು ಶ್ರಮಿಸಬೇಕು ಎಂದು ಶಾಸಕರು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

Related