ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದ್ದು, ನಟ ದರ್ಶನ್ ಸೇರಿದಂತೆ ಇನ್ನಿತರ ಏಳು ಆರೋಪಿಗಳಿಗೂ ಹೈಕೋರ್ಟ್ ನೀಡಿದ ಜಮೀನನ್ನು ಇಂದು ಸುಪ್ರೀಂ ಕೋರ್ಟ್ ರದ್ದು ಕೋರಿದೆ.
ಇನ್ನು ಜಾಮೀನು ರದ್ದು ಆಗುತ್ತಿದ್ದಂತೆ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ A1 ಆರೋಪಿಯಾಗಿರುವ ನಟಿ ಪವಿತ್ರ ಗೌಡ ಅವರನ್ನ ಅರೆಸ್ಟ್ ಮಾಡಲು ಪೊಲೀಸರು ಅವರ ಮನೆಗೆ ತೆರಳಿದ್ದಾರೆ. ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಕೂಡಲೇ ಬಂಧಿಸಲಾಗುತ್ತಿದೆ. ಇದನ್ನೂ ಓದಿ: ದರ್ಶನ್ ತಕ್ಷಣವೇ ಅರೆಸ್ಟ್ ಮಾಡಿ: ಸುಪ್ರೀಂ ಆದೇಶ
ದರ್ಶನ್ ಸೇರಿದಂತೆ ಏಳು ಜನ ಆರೋಪಿಗಳನ್ನು ವಶಕ್ಕೆ ಪಡೆಯಲು ಸೂಚಿಸಲಾಗಿದೆ. ಗೋವಿಂದರಾಜನಗರ, ವಿಜಯನಗರ, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ, ಚಂದ್ರ ಲೇಔಟ್, ಆರ್ ಆರ್ ನಗರ, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಸ್ಟೇಷನ್ ಗಳಿಗೆ ಸೂಚನೆ ನೀಡಲಾಗಿದೆ.
ಈಗಾಗಲೇ ಪವಿತ್ರ ನಿವಾಸದ ಬಳಿ ಮಹಿಳಾ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ. ಅಲ್ಲದೆ ತನಿಕ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪವಿತ್ರ ಗೌಡ ಪೊಲೀಸರ ವಶವಾಗಲಿದ್ದಾರೆ.
