ಬಿಜೆಪಿಯ ಸುಳ್ಳಿನ ಸಂತೆಗೆ ಜನ ಮರಳಾಗುವುದಿಲ್ಲ: ಸೌಮ್ಯಾರೆಡ್ಡಿ

ಬಿಜೆಪಿಯ ಸುಳ್ಳಿನ ಸಂತೆಗೆ ಜನ ಮರಳಾಗುವುದಿಲ್ಲ: ಸೌಮ್ಯಾರೆಡ್ಡಿ

ಬೆಂಗಳೂರು: ಬಿಜೆಪಿಯ ಸೊಳ್ಳಿನ ಸಂತೆಗೆ ಮರುಳಾಗದೆ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ದೇಶದಲ್ಲಿ ಕಾಂಗ್ರೆಸ್ ಆಡಳಿತ ತರಬೇಕೆಂದು ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಮತದಾನದಲ್ಲಿ ಮನವಿ ಮಾಡಿದ್ದಾರೆ.

ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಮತಯಾಚಿಸಿ ಮಾತನಾಡಿದ ಸೌಮ್ಯಾ ರೆಡ್ಡಿ, ಹಿಂದೆ ಕಾಂಗ್ರೆಸ್ ಪಕ್ಷದ ನಾಯಕರುಗಳು ಮಾಡಿರುವ ಅಭಿವೃದ್ಧಿಯನ್ನು ಈಗಿರುವ ಬಿಜೆಪಿ ಪಕ್ಷ ಹಾಳು ಮಾಡುತ್ತಿದೆ ಎಂದು ಬಿಜೆಪಿ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದರು.

ಶಿಕ್ಷಣ, ಆರೋಗ್ಯ, ವಿಜ್ಞಾನ, ಬಾಹ್ಯಾಕಾಶ ಕ್ಷೇತ್ರಗಳು ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ದೇಶ ಅಭಿವೃದ್ಧಿ ಹೊಂದಲು ಕಾಂಗ್ರೆಸ್‌ ಅನುಷ್ಠಾನಗೊಳಿಸಿದ ಅಭಿವೃದ್ಧಿ ಕಾರ್ಯಗಳೇ ಕಾರಣ. ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ದೇಶದಲ್ಲಿ ಲಕ್ಷಾಂತರ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸಿದೆ, ವಿಮಾನ ನಿಲ್ದಾಣ, ರೈಲ್ವೆ ಸಂಪರ್ಕ, ಬಾಹ್ಯಾಕಾಶದಲ್ಲಿ ಯಶಸ್ಸನ್ನು ಗಳಿಸುವಂತೆ ಮಾಡಿದೆ. ಬಿಜೆಪಿ ನಾಯಕರು ಹೇಳುವ ಸುಳ್ಳುಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

 

Related