ಮಾಸ್ಕ್ನಲ್ಲಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ

ಮಾಸ್ಕ್ನಲ್ಲಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ

ಭಟ್ಕಳ : ಕೊರೋನಾ ವೈರಸ್‌ನ ಲಾಭ ಪಡೆದು ಎನ್-95 ಫೇಸ್ ಮಾಸ್ಕ್‌ನಲ್ಲಿ ಚಿನ್ನವನ್ನು ಕಳ್ಳಸಾಗಣೆ ಯತ್ನಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಂಕ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಆಗಮಿಸಿದ್ದ ವ್ಯಕ್ತಿಯನ್ನು ಕರ್ನಾಟಕ ಭಟ್ಕಳದ ನಿವಾಸಿ ಎಂದು ಗುರುತಿಸಲಾಗಿದೆ. ಈತ ಎನ್-95 ಮಾಸ್ಕ್‌ನಲ್ಲಿ ಗಾಳಿ ಆಡಲು ಇಟ್ಟಿರುವ ರಂಧ್ರದಲ್ಲಿ 2 ಲಕ್ಷ ರು.ನ 40 ಗ್ರಾಮ್ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮಾಸ್ಕ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ಮೊದಲ ಪ್ರಕರಣ ಇದಾಗಿದೆ ಎಂದು ಸುಂಕ ಅಧಿಕಾರಿಗಳು ತಿಳಿಸಿದ್ದಾರೆ.

Related