ಗದ್ದೆ ನಾಟಿ ಮಾಡಿದ : ಶೋಭಾ

ಗದ್ದೆ ನಾಟಿ ಮಾಡಿದ : ಶೋಭಾ

ಮಂಡ್ಯ: ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೋಮವಾರ ತಾಲ್ಲೂಕಿನ ಹೊನಗನಹಳ್ಳಿಯಲ್ಲಿ ಗದ್ದೆನಾಟಿ ಮಾಡಿ ಗಮನ ಸೆಳೆದರು.
ರೈತ ಮಹಿಳೆಯರ ಜೊತೆ ಗದ್ದೆಗೆ ಇಳಿದ ಶೋಭಾ ನಾಟಿ ಮಾಡಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಜೊತೆ ಟ್ರ‍್ಯಾಭಕ್ಟರ್ ಏರಿ ನಾಟಿ ಯಂತ್ರದ ಮೂಲಕವೂ ನಾಟಿ ಮಾಡಿದರು.

ಹಾಗೆಯೇ ಸಾತನೂರು ಗ್ರಾಮದ ಆಲೆಮನೆಗೆ ತೆರಳಿ ಬೆಲ್ಲ ತಯಾರಾಗುವ ಪ್ರಕ್ರಿಯೆ ವೀಕ್ಷಿಸಿದರು. ಕ್ರಷರ್‌ಗೆ ಕಬ್ಬು ಕೊಟ್ಟು ಬೆಲ್ಲದ ರುಚಿ ಸವಿದು ‘ರಾಸಾಯನಿಕ ಬೆಲ್ಲ ತಯಾರಿಕೆ ಬಗ್ಗೆ ಮಾಹಿತಿ ಪಡೆದುಕೊಂಡ ಅವರು ಬೆಲ್ಲ ತಯಾರಿಕೆಯಲ್ಲಿ ರಾಸಾಯನಿಕ ಬೆರೆಸಬಾರದು, ಕಲಬೆರಕೆ ಮಾಡಬಾರದು ಎಂದು ಸಲಹೆ ನೀಡಿದರು.

Related