ದೆಹಲಿ: ದೇಶದಾದ್ಯಂತ ಇಂದು 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಎಲ್ಲೆ ನೋಡಿದರೂ ತ್ರಿವರ್ಣ ಧ್ವಜಗಳ ಹಾರಾಟ ಕಣ್ಮಾನ ಸೆರೆಯುತ್ತಿದೆ.
79ನೆಯ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸಿದರು. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿ ದೇಶವನ್ನು ಉದ್ದೇಶಿಸಿ ಮಾತನಾಡಿದರು. ಇದನ್ನೂ ಓದಿ: ಧ್ವಜಾರೋಹಣ ನೆರವೇರಿಸಿದ ಸಿಎಂ
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಘೋಷವಾಕ್ಯ ‘ನಯ ಭಾರತ’. ಸಮೃದ್ಧ, ಸುರಕ್ಷಿತ ಮತ್ತು ದಿಟ್ಟ ನವ ಭಾರತದ ನಿರಂತರ ಉದಯವನ್ನು ಸ್ಮರಿಸುವ ಧ್ಯೇಯವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಜಾರೋಹಣಕ್ಕೂ ಮುನ್ನ ದೆಹಲಿಯ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ನಂತರ ರಾಷ್ಟ್ರದ ನೇತೃತ್ವ ವಹಿಸಿ ಸಂಭ್ರಮಿಸಲು ಕೆಂಪು ಕೋಟೆಗೆ ಆಗಮಿಸಿದರು. ಮೋದಿ ಅವರನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದರು.
